ಬಿಜೆಪಿಯಿಂದ ಏ.21 ರಂದು ಮೈಸೂರಿನಲ್ಲಿ ನೇಕಾರರ ಸಮಾವೇಶ

Is the base of BJP shaking
Published on

ಮೈಸೂರು: ಬಿಜೆಪಿ ನೇಕಾರ ಪ್ರಕೋಷ್ಠ ವತಿಯಿಂದ ಏ.21 ರಂದು ಬೆಳಗ್ಗೆ 10.30ಕ್ಕೆ ನಗರದ ವಸ್ತು ಪ್ರದರ್ಶನ ಆವರಣದಲ್ಲಿ ನೇಕಾರರ ಸಮಾ ವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ನೇಕಾರ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿ.ಎಸ್. ಸೋಮಶೇಖರ್ ಹೇಳಿದರು.

ಸಮುದಾಯದ ಅಭಿವೃದ್ಧಿಗೆ ನೇಕಾರ ಸಮ್ಮಾನ್ ಯೋಜನೆ, ಅಭಿವೃದ್ಧಿ ನಿಗಮ, ನೇಕಾರರ ಸಾಲಮನ್ನಾ ಯೋಜನೆ ಮೂಲಕ ಕೇಂದ್ರದ ಎನ್‌ಡಿಎ ಸರ್ಕಾರ ನೇಕಾರರ ಪರವಾಗಿ ಕೆಲಸ ಮಾಡಿದೆ. ಪ್ರತಿ ಜಿಲ್ಲೆಯಲ್ಲೂ ಟೆಕ್ಸ್‌ಟೈಲ್ ಪಾರ್ಕ್ ನಿರ್ಮಾಣಕ್ಕೆ ಆದೇಶಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್, ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅವರನ್ನು ಈ ಬಾರಿ ಸಮುದಾಯದವರು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಸ್.ಸಿ. ಸತೀಶ್, ಜಿಲ್ಲಾ ಕಾರ್ಯದರ್ಶಿ ಚಲುವರಾಜು, ಪ್ರಕೋಷ್ಠ ರಾಜ್ಯ ಸದಸ್ಯ ಎಸ್.ಆರ್.ನಾಗಭೂಷಣ, ದೇವಾಂಗ ಸಂಘದ ಚಾಮರಾಜನಗರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ಮೋಹನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net