ವಾರದ ಸಂತೆಗೆ ಬಂದ ವ್ಯಾಪಾರಸ್ಥರಿಗೆ ತರಾಟೆ

8 sambaragi 2-Web
ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಜಂಬಗಿ ಗ್ರಾಮದಲ್ಲಿ ಬುಧವಾರ ವಾರದ ಸಂತೆಗೆ ಬಂದಿದ್ದ ವ್ಯಾಪಾರಸ್ಥರು ಹಾಗೂ ಗ್ರಾಹಕರು.
Published on

ಸಂಬರಗಿ: ಸಮೀಪದ ಜಂಬಗಿ ಗ್ರಾಮದಲ್ಲಿ ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಬುಧವಾರ ವಾರದ ಸಂತೆಯಲ್ಲಿ ಪಾಲ್ಗೊಂಡಿದ್ದ ವ್ಯಾಪಾರಸ್ಥರನ್ನು ಗ್ರಾಪಂ ಸಿಬ್ಬಂದಿ ತರಾಟೆಗೆ ತೆಗೆದುಕೊಂಡು ಸಂತೆಯನ್ನು ಬಂದ್ ಮಾಡಿದರು.

ಕರೊನಾ ವೈರಸ್ ನಿಯಂತ್ರಿಸಲು ಲಾಕ್‌ಡೌನ್ ಆದೇಶ ಜಾರಿಯಾಗಿದೆ. ಜಾತ್ರೆ, ಸಂತೆ, ಸಭೆ, ಸಮಾರಂಭಗಳನ್ನು ರದ್ದುಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಜಾಗೃತಿ ಮೂಡಿಸಲಾಗಿದೆ. ಆದರೆ, ಇದ್ಯಾವುದನ್ನೂ ಲೆಕ್ಕಿಸದೆ ವ್ಯಾಪಾರಸ್ಥರು ಬಂದು ಕಾಯಿಪಲ್ಲೆ ಮಾರಾಟ ಮಾಡಲು ಪ್ರಾರಂಭಿಸಿದ್ದರು. ಇದನ್ನು ಕಂಡ ಗ್ರಾಮಸ್ಥರು ಹಾಗೂ ಗ್ರಾಪಂ ಸಿಬ್ಬಂದಿ ವ್ಯಾಪಾರಸ್ಥರನ್ನು ತರಾಟೆಗೆ ತೆಗೆದುಕೊಂಡರು.

ಸಂತೆ ಸ್ಥಗಿತಗೊಳಿಸಿ ಮರಳಿ ಹೋಗುವಂತೆ ತಿಳಿವಳಿಕೆ ನೀಡಿದರು. ‘ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ವಾರದ ಸಂತೆ, ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ದಯವಿಟ್ಟು ಸಾರ್ವಜನಿಕರು ಸಹಕರಿಸಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಾದೇವ ಮಂಡಲೆ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net