

ಮಂಗಳೂರು: ಇಂಗ್ಲೆಂಡ್ ನ ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ 22 ನೇ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಪಡೆದ ವೇಟ್ ಲಿಫ್ಟರ್ ಕುಂದಾಪುರದ ಗುರುರಾಜ್ ಪೂಜಾರಿ ಭಾನುವಾರ ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯವಾಗಿ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.
ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ , ಹಿರಿಯ ಪೊಲೀಸ್ ಅಧಿಕಾರಿಗಳು, ಅಭಿಮಾನಿಗಳು ಸ್ವಾಗತಿಸಿದರು.