ಸ್ಪರ್ಧೆಗೆ ನಿಲ್ಲುವ ಸಾಮರ್ಥ್ಯ ಬೆಳೆಸಿಕೊಳ್ಳಲಿ

13Kush03
ಶಿರಾಂಗಾಲದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಪುಟ್ಟರಾಜು ಉದ್ಘಾಟಿಸಿದರು. ಹಂಡ್ರಂಗಿ ನಾಗರಾಜ್, ಸರೋಜಾ, ಗಿರೀಶ್, ಶೋಭಾ, ಅಕ್ಷತಾ, ಪೂಜಾ, ಕಾವ್ಯಾ, ನೀಲಾಂಬಿಕೆ ಉಪಸ್ಥಿತರಿದ್ದರು.
Published on

ಕುಶಾಲನಗರ: ವಿದ್ಯಾರ್ಥಿಗಳು ತಂದೆ-ತಾಯಿ, ಗುರು-ಹಿರಿಯರಿಗೆ ಗೌರವ ಕೊಡುವುದರ ಮೂಲಕ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೊಡಗು ಜಿಲ್ಲೆಯ ನಿವೃತ್ತ ಉಪನಿರ್ದೇಶಕ ಪುಟ್ಟರಾಜು ಕರೆ ನೀಡಿದರು.

ಶಿರಾಂಗಾಲದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಕಾಲೇಜುಗಳಲ್ಲಿ ಓದುವ ಮಕ್ಕಳು ಮಧ್ಯಮ ವರ್ಗ ಮತ್ತು ಬಡವರ್ಗಕ್ಕೆ ಸೇರಿದವರಾಗಿದ್ದು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧೆಗೆ ನಿಲ್ಲುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಪಾಠದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ದೈಹಿಕ, ಮಾನಸಿಕ ಬಲವನ್ನು ವೃದ್ಧಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಕಷ್ಟ ಪಡುವುದಕ್ಕಿಂತ ಇಷ್ಟಪಡುವುದು ಬಹಳ ಮುಖ್ಯ. ದ್ವಿತೀಯ ಪಿಯುಸಿ ಪರೀಕ್ಷೆಗಳು ಸರಳೀಕೃತವಾಗಿದೆ. ಇದನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಅಂಕಗಳನ್ನು ಪಡೆಯುವುದರ ಮೂಲಕ ಕಾಲೇಜಿಗೆ, ತಂದೆ-ತಾಯಿಗೆ ಒಳ್ಳೆಯ ಹೆಸರನ್ನು ತರಬೇಕೆಂದು ಹೇಳಿದರು.

ಹಿರಿಯ ಉಪನ್ಯಾಸಕ ಹಂಡ್ರಂಗಿ ನಾಗರಾಜ್‌ಮಾತನಾಡಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಉಪಯೋಗಗಳನ್ನು ಪಡೆದುಕೊಂಡು ಮುಂದಿನ ದಿನಗಳಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ತಿಳಿಸಿದರು.

ಉಪನ್ಯಾಸಕಿ ಸರೋಜಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಾಂಶುಪಾಲ ಪಿ.ಸೋಮಚಂದ್ರ, ಸಾಂಸ್ಕೃತಿಕ ವಿಭಾಗದ ಕಾರ್ಯದರ್ಶಿ ಕೆ.ಕೆ.ಭವಾನಿ, ಉಪನ್ಯಾಸಕರಾದ ಎಚ್.ಆರ್.ಶಿವಕುಮಾರ್, ಗಿರೀಶ್, ಶೋಭಾ, ಅಕ್ಷತಾ, ಪೂಜಾ, ಕಾವ್ಯಾ, ನೀಲಾಂಬಿಕೆ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net