ಬಿ.ವಿ.ನಾಯಕ ಕಾಂಗ್ರೆಸ್ ಸೇರ್ಪಡೆಯಾದರೆ ಸ್ವಾಗತ

IMG-20240329-WA0150
Published on

ರಾಯಚೂರು: ಕಾಂಗ್ರೆಸ್ ಸಿದ್ಧಾಂತ ಹಾಗೂ ನಾಯಕತ್ವವನ್ನು ಒಪ್ಪಿ ಬರುವವರಿಗೆ ಪಕ್ಷದ ಬಾಗಿಲು ತೆರೆದಿರುತ್ತದೆ. ಮಾಜಿ ಸಂಸದ ಬಿ.ವಿ.ನಾಯಕ ಮರಳಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುವುದಾಗಿ ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ದಿವಂಗತ ವೆಂಕಟೇಶ ನಾಯಕರ ಕುಟುಂಬ ಕಾಂಗ್ರೆಸ್‌ನಿಂದ ಬಂದಿದ್ದು, ನಾಲ್ಕು ಬಾರಿ ಸಂಸದರಾಗಿ, ಶಾಸಕರಾಗಿದ್ದ ವೆಂಕಟೇಶ ನಾಯಕರ ಪುತ್ರ ಪಕ್ಷದಿಂದ ಸಂಸದರಾಗಿ ಹಾಗೂ ಜಿಲ್ಲಾ ಕಾರ್ಯನಿರ್ವಹಿಸಿದ್ದರು.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದರು. ಬಿಜೆಪಿ ಅವರನ್ನು ಹೇಗೆ ನಡೆಸಿಕೊಳ್ಳುತ್ತಿದೆ ಎಂದು ಅವರಿಗೆ ಗೊತ್ತಾಗಿದೆ. ಪಕ್ಷಕ್ಕೆ ವಾಪಸ್ ಬಂದರೆ ಸ್ವಾಗತಿಸಲಾಗುವುದು. ಅಂತಿಮ ನಿರ್ಧಾರ ಅವರಿಗೆ ಬಿಟ್ಟದ್ದು.
ಪಕ್ಷದಿಂದ ಜಿ.ಕುಮಾರನಾಯಕಗೆ ಟಿಕೆಟ್ ನೀಡಲಾಗಿದೆ. ಮೂರು ದಶಕಗಳ ಅಕಾರಾವಯಲ್ಲಿ ಕಪ್ಪು ಚುಕ್ಕೆಯಿಲ್ಲದೆ ಕಾರ್ಯನಿರ್ವಹಿಸಿದ್ದಾರೆ. ಎಲ್ಲರೂ ಸೇರಿ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸಲಾಗುವುದು ಎಂದು ಎನ್.ಎಸ್.ಬೋಸರಾಜು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಜಯಣ್ಣ, ಮುಖಂಡರಾದ ಕೆ.ಶಾಂತಪ್ಪ, ಅಮರೇಗೌಡ ಹಂಚಿನಾಳ, ಜಿ.ಬಸವರಾಜ ರೆಡ್ಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net