ಬಸವಾದಿ ಶರಣರ ರಥಯಾತ್ರೆಗೆ ಸ್ವಾಗತ

27 vikram 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಆರಂಭಿಸಿರುವ ಅನುಭವ ಮಂಟಪ ಬಸವಾದಿ ಶರಣರ ರಥ ಯಾತ್ರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಭಾನುವಾರ ಅದ್ಧೂರಿ ಸ್ವಾಗತ ಕೋರಲಾಯಿತು.

ರಥಕ್ಕೆ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಪುಷ್ಪಾರ್ಪಣೆ ಮಾಡಿ ಸ್ವಾಗತಿಸಿದರು. ಬಳಿಕ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ವಿವಿಧ ಕಲಾ ತಂಡಗಳು ರಥಯಾತ್ರೆ ಮೆರವಣಿಗೆಯಲ್ಲಿ ಭಾಗವಹಿಸಿ ಮೆರಗು ನೀಡಿದವು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಜಿಪಂ ಉಪ ಕಾರ್ಯದರ್ಶಿ ಬಿ.ಎಸ್​. ಮೂಗನೂರಮಠ, ತಹಸೀಲ್ದಾರ ಡಾ.ಡಿ.ಎಚ್​.ಹೂಗಾರ, ಕನ್ನಡ ಸಾಹಿತ್ಯ ಪರಿಷತ್​ ತಾಲೂಕು ಅಧ್ಯಕ್ಷ ಮಹಾಂತೇಶ ನರೆಗಲ್ಲ, ಮುಖಂಡರಾದ ಪ್ರಭಣ್ಣ ನಡಕಟ್ಟಿ, ನಾಗರಾಜ ಪಟ್ಟಣಶಟ್ಟಿ, ಶಾಂತವೀರ ಬಡಿಗೇರ, ಬಸವಂತಪ್ಪ ತೋಟದ, ಸವಿತಾ ಅಮರಶಟ್ಟಿ, ಸುರೇಶ ಹೊರಕೇರಿ, ಶಂಕರ ಹಲಗತ್ತಿ, ಡಾ.ಜಿನದತ್ತ ಹಡಗಲಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಬಸವ ಕೇಂದ್ರದ ಪ್ರತಿನಿಧಿಗಳು, ಬಸವಾಭಿಮಾನಿಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net