

ಬೆಳಗಾವಿ: ಬೆಳವಡಿ ಮಲ್ಲಮ್ಮನ ಉತ್ಸವದ ಅಂಗವಾಗಿ ಜಿಲ್ಲಾದ್ಯಂತ ಸಂಚರಿಸುತ್ತಿರುವ ಜ್ಯೋತಿಯಾತ್ರೆಯನ್ನು ಬೆಳಗಾವಿ ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಗುರುವಾರ ಸ್ವಾಗತಿಸಲಾಯಿತು. ಮಹಾನಗರ ಪಾಲಿಕೆ ಉಪ ಆಯುಕ್ತ ಉದಯಕುಮಾರ್ ತಳವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಇದ್ದರು.