ಸಂವಿಧಾನ ಜಾಗೃತಿ ಜಾಥಾಕ್ಕೆ ಸ್ವಾಗತ

31.npk ..1.
Published on


ಮಡಿಕೇರಿ: ಸಂವಿಧಾನ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ಸಂವಿಧಾನ ಜಾಗೃತಿ ಜಾಥಾಕ್ಕೆ ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿ ವತಿಯಿಂದ ಸ್ವಾಗತ ನೀಡಲಾಯಿತು.


ನಾಪೋಕ್ಲುವಿನ ಗ್ರಾಮದ ಯುವಕರ ಮುಂದಾಳತ್ವದ ಬೈಕ್ ಜಾಥಾ ಹಾಗೂ ಸಂಜೀವಿನಿ ಒಕ್ಕೂಟದಿಂದ ಕಳಸದೊಂದಿಗೆ ಸಾರ್ವಜನಿಕರು, ವಿಧ್ಯಾರ್ಥಿಗಳು ಜಾಥಾ ಬರಮಾಡಿಕೊಂಡರು.


ಸಂವಿಧಾನ ಮಹತ್ವ ಕುರಿತು ಸಂಪನ್ಮೂಲ ವ್ಯಕ್ತಿ ಶ್ರೀಶೈಲ ದೇಸಾಯಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಹಂಸ, ತಾಲೂಕು ನೋಡಲ್ ಅಧಿಕಾರಿ ಹರ್ಷವರ್ಧನ್ ಸಂವಿಧಾನ ಜಾಥಾ ಮಹತ್ವದ ಕುರಿತು ಮಾತನಾಡಿದರು. ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ ಪ್ರಾಸ್ತಾವಿಕ ನುಡಿಗಳನ್ನಾಡಿದರು.


ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷೆ ಅನುರಾಧಾ, ಸದಸ್ಯರಾದ ಮೊಣ್ಣಪ್ಪ, ಹಮೀದ್, ಕುಸುಮಾವತಿ, ಪಾರ್ವತಿ, ಟೈನಿ, ಕೆ.ಆರ್ ಅನಿತಾ, ಚೌರೀರ ಅನಿತಾ, ಲಕ್ಷ್ಮೀ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಎ.ಅಬ್ದುಲ್ಲ, ಸಂಜೀವಿನಿ ಒಕ್ಕೂಟದ ಸದಸ್ಯರು, ಶಾಲಾ ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತರು, ಗ್ರಾಮಸ್ಥರು ವಿಧ್ಯಾರ್ಥಿಗಳು ಭಾಗವಹಿಸಿದರು. ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ವಿಭಾಗಗಳಲ್ಲಿ ನಡೆಸಲಾದ ಸ್ಪರ್ಧಾ ಕಾರ್ಯಕ್ರಮದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪಂಚಾಯಿತಿ ಕಾರ್ಯದರ್ಶಿ ಚಂದ್ರಶೇಖರ್ ಸ್ವಾಗತಿಸಿ, ತಾರಾವತಿ ಸಂವಿಧಾನದ ಪ್ರಸ್ತಾವನೆ ಬೋಧಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net