ಸಂವಿಧಾನ ಜಾಗೃತಿ ಜಾಥಾಕ್ಕೆ ಸ್ವಾಗತ

ಸಂವಿಧಾನ ಜಾಗೃತಿ ಜಾಥಾಕ್ಕೆ ಸ್ವಾಗತ
Published on

ಶನಿವಾರಸಂತೆ: ಇಲ್ಲಿನ ಗ್ರಾಮ ಪಂಚಾಯಿತಿ ಮುಂಭಾಗ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರವನ್ನು ಗ್ರಾಪಂ ಪದಾಧಿಕಾರಿಗಳು ಬರಮಾಡಿಕೊಂಡರು.

ಗ್ರಾ.ಪಂ. ಅಧ್ಯಕ್ಷೆ ಗೀತಾ ಹರೀಶ್, ಪಿಡಿಒ ಹರೀಶ್, ನೋಡಲ್ ಅಧಿಕಾರಿ ಮಂಜುನಾಥ್ ಶೆಟ್ಟಿ ಹಾಗೂ ಸದಸ್ಯರು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ರಥಕ್ಕೆ ಗೌರವ ಸಮರ್ಪಿಸಿದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು, ದಸಂಸ ಸಂಘಟನೆಯ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ದುಂಡಳ್ಳಿಯಲ್ಲಿ ಸ್ವಾಗತ: ಸಂವಿಧಾನ ಜಾಗೃತಿ ಜಾಥಾವನ್ನು ದುಂಡಳ್ಳಿಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಸತ್ಯವತಿ ದೇವರಾಜ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಶಿ, ಮಂಜುನಾಥ್ ಶೆಟ್ಟಿ ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿದರು. ಗ್ರಾಮದ ಮಹಿಳೆಯರು ಪೂರ್ಣಕುಂಭ ಕಳಸದೊಂದಿಗೆ ಸ್ವಾಗತಿಸಿದರು.

ನಂತರ ನಡೆದ ಕಾರ್ಯಕ್ರಮದಲ್ಲಿ ಸಂವಿಧಾನದ ಮಹತ್ವ ಹಾಗೂ ಜಾಥಾದ ಕುರಿತು ಮಂಡ್ಯದ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಲೋಕೇಶ್ ಮಾತನಾಡಿದರು. ಜಾಥಾ ಮೆರವಣಿಗೆಯಲ್ಲಿ ಗ್ರಾ.ಪಂ. ಸದಸ್ಯರು, ಪಿಡಿಒ ಆಯಿಷಾ ಬಾನು, ಗ್ರಾ.ಪಂ.ಸಿಬ್ಬಂದಿ, ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net