ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ

Sul_Law
Published on

ಸುಳ್ಯ: ಕೆವಿಜಿ ಕಾನೂನು ಮಹಾವಿದ್ಯಾಲಯದ 2024-25ನೇ ಶೈಕ್ಷಣಿಕ ವರ್ಷ ಈಗಾಗಲೇ ಪ್ರಾರಂಭವಾಗಿದ್ದು, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿ, ಕಾನೂನು ವಿದ್ಯಾಭ್ಯಾಸದ ಮಹತ್ವ, ಮುಂದಿನ ಅವಕಾಶಗಳ ಬಗ್ಗೆ ತಿಳಿಸಿದರು. ಎಒಎಲ್ಇ ಉಪಾಧ್ಯಕ್ಷೆ ಶೋಭಾ ಚಿದಾನಂದ, ಎಒಎಲ್ಇ ಸದಸ್ಯ ಜಗದೀಶ್ ಅಡ್ತಲೆ, ನೆಹರು ಮೆಮೋರಿಯಲ್ ಕಾಲೇಜು ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು, ಕೆ.ವಿ.ಜಿ. ಕಾನೂನು ಕಾಲೇಜು ಸಲಹೆಗಾರ ಹೇಮನಾಥ್ ಕೆ.ವಿ., ಕಾನೂನು ಕಾಲೇಜು ಆಡಳಿತಾಧಿಕಾರಿ ಪ್ರೊ.ದಾಮೋದರ ಗೌಡ ಉಪಸ್ಥಿತರಿದ್ದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಟೀನಾ ಎಚ್.ಎಸ್. ಕಾಲೇಜಿನ ಬಗ್ಗೆ ಮಾಹಿತಿ ನೀಡಿದರು.

ವಿದ್ಯಾರ್ಥಿನಿಯರಾದ ಸುಶ್ಮಿತಾ ಬಿ.ಎಂ., ರಮ್ಯ ಕೆ.ಎಂ., ಚಂದನಾ ಪಿ.ಎಸ್. ಪ್ರಾರ್ಥಿಸಿದರು. ಉಪನ್ಯಾಸಕಿ ಕಲಾವತಿ ಎಂ. ಸ್ವಾಗತಿಸಿದರು. ಉಪನ್ಯಾಸಕಿ ರಶ್ಮಿ ಎಚ್. ವಂದಿಸಿದರು. ಉಪನ್ಯಾಸಕಿ ಉಷಾ ಸಿ.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು, ಪಾಲಕರು, ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net