ಕನ್ನಡ ಜ್ಯೋತಿ ರಥಕ್ಕೆ ಸ್ವಾಗತ

20ckm 20
Published on

ಬಣಕಲ್: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ರಾಜ್ಯಾದ್ಯಾಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಯ ರಥವನ್ನು ಚಿಕ್ಕಮಗಳೂರು ಗಡಿ ಭಾಗವಾದ ಮಾಗಡಿ ಹ್ಯಾಂಡ್ ಪೋಸ್ಟ್ ನಲ್ಲಿ ಸ್ವಾಗತಿಸಲಾಯಿತು.
21ರಂದು ಜಿಲ್ಲಾಧಿಕಾರಿ ಕಚೇರಿಯಿಂದ ಜಿಪಂವರೆಗೆ ವಿಜೃಂಭಣೆಯ ರಥಯಾತ್ರೆ ನಡೆಯಲಿದ್ದು, ಸಾಂಸ್ಕೃತಿಕ ವಲಯದ ಪ್ರಮುಖರು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು, ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ರಥಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ರಥಯಾತ್ರೆ ಉದ್ದೇಬೋರನಹಳ್ಳಿ, ಸಖರಾಯಪಟ್ಟಣ, ಸರಸ್ವತಿಪುರ ಮಾರ್ಗವಾಗಿ ಕಡೂರು ಕಡೆಗೆ ಸಾಗಲಿದೆ. ಸೆ 22 ರಂದು ಕಡೂರು, 23ಕ್ಕೆ ತರೀಕೆರೆ, 24 ಎನ್.ಆರ್ ಪುರ, 25 ಕೊಪ್ಪ, 26 ರಂದು ಮೂಡಿಗೆರೆಗೆ ರಥಯಾತ್ರೆ ಬರಲಿದೆ. ಮೂಡಿಗೆರೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಸಲಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ ರಮೇಶ್, ತಹಸೀಲ್ದಾರ್ ಸುಮಂತ್, ಅಧಿಕಾರಿಗಳಾದ ಶ್ರೀನಿವಾಸ್, ಸಿಬ್ಬಂದಿ ನವದೀಪ್, ಮಲ್ಲಿಕಾರ್ಜುನ್, ಪೊಲೀಸ್ ಇಲಾಖೆ ಅಕಾರಿಗಳು, ಕನ್ನಡ ಪರ ಸಂಘಟನೆಗಳ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net