ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ

04 TKE 1,1
Published on

ತರೀಕೆರೆ: ಅಜ್ಜಂಪುರ ಪಟ್ಟಣಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ನಾಗರಿಕರು ಅದ್ಧೂರಿಯಾಗಿ ಬರ ಮಾಡಿಕೊಂಡರು.

ಪಟ್ಟಣ ಪ್ರವೇಶಿಸಿದ ಭುವನೇಶ್ವರಿ ಪುತ್ಥಳಿ ಹೊತ್ತ ಕನ್ನಡ ಜ್ಯೋತಿ ರಥಯಾತ್ರೆಯನ್ನು ಭವ್ಯವಾಗಿ ಸ್ವಾಗತಿಸಿದ ಕನ್ನಡ ಅಭಿಮಾನಿಗಳು ಮಹಾತ್ಮ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ಪುಷ್ಪ ನಮನ ಸಲ್ಲಿಸಿದ ನಂತರ ಭುವನೇಶ್ವರಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ತಾಲೂಕು ಅಧ್ಯಕ್ಷ ಎಚ್.ಆರ್.ಚಂದ್ರಪ್ಪ, ತಹಸೀಲ್ದಾರ್ ಶಿವಶರಣಪ್ಪ ಕಟ್ಟೋಳಿ, ತಾಪಂ ಇಒ ಎಂ.ಕೆ.ವಿಜಯಕುಮಾರ್, ಸಾಹಿತಿ ಡಿ.ಪಿ.ರಾಜಪ್ಪ, ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ತಾಲೂಕು ಅಧ್ಯಕ್ಷ ಎಚ್.ಗುರುಮೂರ್ತಿ, ಜಾನಪದ ಪರಿಷತ್ ಅಧ್ಯಕ್ಷೆ ವಿಜಯಕುಮಾರಿ, ದಲಿತ ಸಂಘಟನೆ ಮುಖಂಡ ಶಿವಣ್ಣ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net