ಶಿರಸಿಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ ಸ್ವಾಗತ

SIRSI RATHA YATRE
Published on

ಶಿರಸಿ: ಕರ್ನಾಟಕ ಸಂಭ್ರಮ-50 ಕನ್ನಡ ಜ್ಯೋತಿ ರಥಯಾತ್ರೆ ಸೋಮವಾರ ಪಟ್ಟಣಕ್ಕೆ ಆಗಮಿಸಿದ್ದು, ಇಲ್ಲಿಯ ಮಿನಿ ವಿಧಾನಸೌಧದ ಆವರಣದಲ್ಲಿ ಪೂಜೆ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ, ಈ ಸಂಭ್ರಮ ಕೇವಲ ಆಚರಣೆಗಷ್ಟೇ ಸೀಮಿತವಾಗಿರಬಾರದು. ಪ್ರತಿಯೊಬ್ಬರಿಗೂ ಕನ್ನಡ ಭಾಷೆಯ ವಿಶೇಷತೆ ತಿಳಿಸಿ, ಕನ್ನಡ ಭಾಷಾಭಿಮಾನ ಮೂಡಿಸಬೇಕು ಎಂದರು.

ನಗರಸಭೆ ಅಧ್ಯಕ್ಷೆ ಶರ್ವಿುಳಾ ಮಾದನಗೇರಿ, ಉಪಾಧ್ಯಕ್ಷ ರಮಾಕಾಂತ ಭಟ್, ಆನಂದ ಸಾಲೇರ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಜಗದೀಶ ಗೌಡ, ವೀಣಾ ಶೆಟ್ಟಿ, ತಹಸೀಲ್ದಾರ್ ಶ್ರೀಧರ ಮುಂದಲಮನಿ, ಪೌರಾಯುಕ್ತ ಕಾಂತರಾಜು, ಇತರರಿದ್ದರು.

ಲಾಂಛನ ಬಿಡುಗಡೆ ಇಂದು

ಉತ್ತರ ಕನ್ನಡ ಜಿಲ್ಲಾ 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಕಾರ್ಯಕ್ರಮ ಅ. 29ರ ಬೆಳಗ್ಗೆ 9.30ಕ್ಕೆ ನಗರದ ಮಿನಿ ವಿಧಾನಸೌಧದಲ್ಲಿ ನಡೆಯಲಿದೆ. ಶಾಸಕ ಭೀಮಣ್ಣ ನಾಯ್ಕ, ಉಪವಿಭಾಗಾಧಿಕಾರಿ ಕೆ. ಕಾವ್ಯಾರಾಣಿ, ತಹಸೀಲ್ದಾರ್ ಶ್ರೀಧರ ಮುಂದಲಮನಿ, ನಗರಸಭೆ ಅಧ್ಯಕ್ಷೆ ಶರ್ವಿುಳಾ ಮಾದನಗೇರಿ, ಉಪಾಧ್ಯಕ್ಷ ರಮಾಕಾಂತ ಭಟ್, ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ, ಕಾರ್ಯದರ್ಶಿ ಪಿ.ಆರ್. ನಾಯ್ಕ, ತಾಲೂಕಾಧ್ಯಕ್ಷ ಜಿ. ಸುಬ್ರಾಯ ಭಟ್ ಬಕ್ಕಳ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿರುವರು. ನಂತರ 10.30ಕ್ಕೆ ಶಿರಸಿ ನಗರಸಭೆ ಕಾರ್ಯಾಲಯದ ಪಕ್ಕದಲ್ಲಿ ಶಿರಸಿ ಕಸಾಪ ಘಟಕದ ಕಾರ್ಯಾಲಯ ಸಹ ಉದ್ಘಾಟನೆಗೊಳ್ಳಲಿದೆ ಎಂದು ಶಿರಸಿ ತಾಲೂಕು ಘಟಕದ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net