ಕನ್ನಡ ಜ್ಯೋತಿ ರಥಯಾತ್ರೆಗೆ ಭವ್ಯ ಸ್ವಾಗತ

23kmr1
ಕನ್ನಡ ಜ್ಯೋತಿ ರಥಯಾತ್ರೆಗೆ ಸೋಮವಾರ ಬೆಳಕುಣಿ ಗ್ರಾಮದಲ್ಲಿ ಭವ್ಯ ಸ್ವಾಗತ ಕೋರಲಾಯಿತು. ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ, ಸಿಪಿಐ ಅಮರಪ್ಪ ಎಸ್., ಪಿಎಸ್‌ಐ ಚಂದ್ರಶೇಖರ ನಿರ್ಣೆ, ತಾಪಂ ಇಒ ಮಾಣಿಕರಾವ ಪಾಟೀಲ್, ತಾಪಂ ಎಡಿಗಳಾದ ಹಣಮಂತರಾಯ ಕೌಟಗೆ, ಶಿವಕುಮಾರ ಘಾಟೆ, ಕಸಾಪ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ, ಬಿಆರ್‌ಪಿ ಶಶಿಕುಮಾರ ಬಿಡವೆ ಇತರರಿದ್ದರು.
Published on

ಕಮಲನಗರ: ಕರ್ನಾಟಕ ಸಂಭ್ರಮ-೫೦ರ ಸಂಭ್ರಮ ನಿಮಿತ್ತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ಸೋಮವಾರ ಬೆಳಕುಣಿ ಗ್ರಾಮದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ತಾಲೂಕು ಆಡಳಿತ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ, ಕನ್ನಡ ಸಾಹಿತ್ಯ ಪರಿಷತ್ ಪ್ರಮುಖರು, ಸ್ಥಳೀಯ ಗಣ್ಯರು ಹಾಗೂ ವಿವಿಧ ಶಾಲೆ ವಿದ್ಯಾರ್ಥಿಗಳು ಯಾತ್ರೆಯನ್ನು ಸ್ವಾಗತಿಸಿದರು. ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ ಅವರು ನಾಡದೇವಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ನಂತರ ಕಮಲನಗರದಲ್ಲಿ ರಥಯಾತ್ರೆಯ ಭವ್ಯ ಮೆರವಣಿಗೆ ನಡೆಯಿತು.

ಮಹಿಳೆಯರ ಕುಂಭ ಕಳಸ, ವಿದ್ಯಾರ್ಥಿಗಳ ಕೋಲಾಟ, ಲಂಬಾಣಿ ನೃತ್ಯ, ಹೆಜ್ಜೆ ಕುಣಿತ, ಡೊಳ್ಳು ಕುಣಿತ, ಭಜನೆ ರಥಯಾತ್ರೆ ಮೆರವಣಿಗೆಗೆ ಮೆರುಗು ನೀಡಿದವು. ಸಿದ್ಧರಾಮೇಶ್ವರ ಪದವಿ ಮಹಾವಿದ್ಯಾಲಯದಿಂದ ಆರಂಭವಾದ ಮೆರವಣಿಗೆ ಸಮುದಾಯ ಆರೋಗ್ಯ ಕೇಂದ್ರ, ಅಲ್ಲಮಪ್ರಭು ವೃತ್ತ, ಪೊಲೀಸ್ ಠಾಣೆ, ಪ್ರವಾಸಿ ಮಂದಿರ ಮಾರ್ಗವಾಗಿ ತಹಸಿಲ್ ಆವರಣಕ್ಕೆ ತಲುಪಿತು. ಮೆರವಣಿಗೆಯುದ್ದಕ್ಕೂ ಕನ್ನಡಾಭಿಮಾನಿಗಳು, ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು, ವಿದ್ಯಾರ್ಥಿಗಳು ಕನ್ನಡದ ಹಾಡುಗಳಿಗೆ ಕುಣಿದು ಕುಪ್ಪಳಿಸಿದರು.

ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಶಾಂತಿವರ್ಧಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶಿವಾಜಿ ಆರ್.ಎಚ್, ಕರ್ನಾಟಕ ಎಂದು ನಾಮಕರಣಗೊಂಡ ೫೦ ವರ್ಷದ ಸವಿನೆನಪಿಗಾಗಿ ರಾಜ್ಯ ಸರ್ಕಾರ ಭುವನೇಶ್ವರಿ ತಾಯಿಯ ಜ್ಯೋತಿ ರಥಯಾತ್ರೆ ಮೂಲಕ ಕನ್ನಡ ನಾಡಿನ ಹಿರಿಮೆ, ಗರಿಮೆಯನ್ನು ಪ್ರತಿ ಗ್ರಾಮಕ್ಕೆ ತಲುಪಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ತಹಸೀಲ್ದಾರ್ ಅಮಿತಕುಮಾರ ಕುಲಕರ್ಣಿ, ಗ್ರೇಡ್-೨ ತಹಸೀಲ್ದಾರ್ ರಮೇಶ ಪೆದ್ದೆ, ಗ್ರಾಪಂ ಅಧ್ಯಕ್ಷೆ ಸುಶೀಲಾ ಸಜ್ಜನಶೆಟ್ಟಿ, ತಾಪಂ ಇಒ ಮಾಣಿಕರಾವ ಪಾಟೀಲ್, ಎಡಿಗಳಾದ ಹಣಮಂತರಾಯ ಕೌಟಗೆ, ಶಿವಕುಮಾರ ಘಾಟೆ, ಕಸಾಪ ತಾಲೂಕು ಅಧ್ಯಕ್ಷ ಪ್ರಶಾಂತ ಮಠಪತಿ, ಬಿಆರ್‌ಪಿ ಶಶಿಕುಮಾರ ಬಿಡವೆ, ಪಿಡಿಒ ರಾಜಕುಮಾರ ತಂಬಾಕೆ, ಪ್ರೊ.ಎಸ್.ಎನ್. ಶಿವಣಕರ, ಪ್ರಕಾಶ ಮಾನಕರಿ, ಧನರಾಜ ಭವರಾ, ಮಹಾದೇವ ಮಡಿವಾಳ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net