

ನಂಜನಗೂಡು: ತಾಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಶ್ರೀ ಮಲೆಯ ಮಾದೇಶ್ವರ ಬೆಟ್ಟಕ್ಕೆ ಹೋಗಿ ಬಂದ ಭಕ್ತಾದಿಗಳನ್ನು ಗ್ರಾಮದ ಮುಖಂಡರು ಭಾನುವಾರ ಪೂರ್ಣ ಕುಂಭದ ಮೂಲಕ ಸ್ವಾಗತಿಸಿದರು.
ಪ್ರತಿವರ್ಷ ದೀಪಾವಳಿ ಸಂದರ್ಭದಲ್ಲಿ ಮನೆಗೊಬ್ಬರಂತೆ ಗ್ರಾಮಸ್ಥರು ಚಾಮರಾಜನಗರ ಜಿಲ್ಲೆಯ ಶ್ರೀ ಮಲೆ ಮಹದೇಶ್ವರ ಸ್ವಾಮಿ ಬೆಟ್ಟಕ್ಕೆ ಹೋಗುವುದು ವಾಡಿಕೆ. ದರ್ಶನ ಮುಗಿಸಿ ಗ್ರಾಮಕ್ಕೆ ಆಗಮಿಸಿದ ಭಕ್ತರನ್ನು ಹಾಲರವಿ ಉತ್ಸವ ಮಾಡುವ ಮೂಲಕ ಪೂರ್ಣ ಕುಂಭ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ದೊಡ್ಡ ಕವಲಂದೆ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಬಸವರಾಜ್, ಬಿಜೆಪಿ ಮುಖಂಡ ಸೋಮಣ್ಣ, ಕಾಂಗ್ರೆಸ್ ಮುಖಂಡ ಮುದ್ದು ಮಾದಶೆಟ್ಟಿ ಸೇರಿದಂತೆ ಇತರರು ಇದ್ದರು.