ಬಸವಜ್ಯೋತಿ ರಥಯಾತ್ರೆಗೆ ಸ್ವಾಗತ

4 SHIROL 2
Published on

ಶಿರೋಳ: ಬಸವಣ್ಣವ ಐಕ್ಯಮಂಟಪ ಕೂಡಲಸಂಗಮದಿಂದ ಗ್ರಾಮಕ್ಕೆ ಆಗಮಿಸಿದ ಬಸವಜ್ಯೋತಿ ರಥಯಾತ್ರೆಗೆ ಭವ್ಯ ಸ್ವಾಗತ ನೀಡಲಾಯಿತು. ನರಗುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶಗೌಡ ಪಾಟೀಲ ರಥಯಾತ್ರೆಗೆ ಭವ್ಯ ಸ್ವಾಗತ ಕೋರಿದರು. ಈ ವೇಳೆ ಮಾತನಾಡಿ, ಬಸವಣ್ಣವರು ಕಾಯಕವೇ ಕೈಲಾಸ ಎಂದು ಹೇಳಿ, ನಿಮ್ಮ ಕೆಲಸಗಳಲ್ಲಿ ದೇವರನ್ನು ಕಾಣಬೇಕು ಎಂದಿದ್ದಾರೆ. ಮಕ್ಕಳಿಗೆ ವಚನಗಳನ್ನು ಹೇಳಿಕೊಡಬೇಕಿದೆ ಎಂದರು. ಶಿರೋಳ ತೋಂಟದಾರ್ಯ ಮಠದ ಶಾಂತಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಬೀರಲಿಂಗೇಶ್ವರ ಡೊಳ್ಳಿನ ಮೇಳದ ಕಲಾವಿದರು, ತಾಯಂದಿರಯ ಪೂರ್ಣಕುಂಭ ಮೆರವಣಿಗೆ ಮೂಲಕ ಯಾತ್ರೆಯನ್ನು ಸ್ವಾಗತಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net