ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತ

ಚಿತ್ರ 11ಎಸ್ ಡಿ ಪಿ 1
ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಣ್ಯರು ಪಾಲ್ಗೊಂಡಿದ್ದರು.
Published on

ಸಿದ್ದಾಪುರ: ಸಿದ್ದಾಪುರಕ್ಕೆ ಶನಿವಾರ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ವಿರಾಜಪೇಟೆ ತಾಲೂಕು ಆಡಳಿತ ಹಾಗೂ ಸಿದ್ದಾಪುರ ಗ್ರಾಮ ಪಂಚಾಯಿತಿಯಿಂದ ಕಾವೇರಿ ಸೇತುವೆ ಬಳಿ ಸ್ವಾಗತ ಕೋರಲಾಯಿತು.

ವಿರಾಜಪೇಟೆ ತಹಸೀಲ್ದಾರ್‌ ರಾಮಚಂದ್ರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಮಹಿಳಾ ಸಂಘದ ಸದಸ್ಯರು, ವಿದ್ಯಾರ್ಥಿಗಳು ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಿ ಸಿದ್ದಾಪುರ ಬಸ್ ನಿಲ್ದಾಣ ಬಳಿ ಸಮಾವೇಶಗೊಂಡಿತು.

ಉಪನ್ಯಾಸಕ ಅರ್ಜುನ್ ಮೌರ್ಯ ಮಾತನಾಡಿ, ಎಲ್ಲರಿಗೂ ಸಂವಿಧಾನದ ಅರಿವು ಮೂಡಿಸಬೇಕು. ಸಂವಿಧಾನದ ಪೀಠಿಕೆ ಪಠ್ಯದಲ್ಲಿ ಅಳವಡಿಸಬೇಕು ಎಂದರು.

ಪೀಠಿಕೆ ಬೋಧನೆ, ಪ್ರತಿಜ್ಞಾ ವಿಧಿ ಸ್ವೀಕಾರ, ವಿವಿಧ ಶಾಲೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಂದ್ರಶೇಖರ್, ಸಿದ್ದಾಪುರ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಗೋಪಾಲ್, ಉಪಾಧ್ಯಕ್ಷ ಪಳನಿಸ್ವಾಮಿ, ಸಮಾಜ ಕಲ್ಯಾಣ ಅಧಿಕಾರಿ ಪ್ರೀತಿ ಚಿಕ್ಕಮಾದು, ಶಫೀಕ್, ಮುಖಂಡ ಎಂ.ಎಸ್.ವೆಂಕಟೇಶ್, ಅಂಬೇಡ್ಕರ್ ಸಂಘದ ಅಧ್ಯಕ್ಷ ರವಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net