ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತ

hangodu
ಹೆಗ್ಗಂದೂರಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಪುಟ್ಟಸಿದ್ದ ಶೆಟ್ಟಿ, ರವಿಕುಮಾರ್, ಸಿದ್ದರಾಜ್, ನಾಗರತ್ನಾ, ಪ್ರತಿಭಾ ಇತರರಿದ್ದರು.
Published on

ಹನಗೋಡು: ಹೋಬಳಿಯ ಹೆಗ್ಗಂದೂರು ಪಂಚಾಯಿತಿ ವ್ಯಾಪ್ತಿಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಗ್ರಾಪಂ ಆಡಳಿತ ಮಂಡಳಿಯು ಸ್ವಾಗತಿಸಲಾಯಿತು.

ಇದೇ ವೇಳೆ ಗಣ್ಯರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆಗೈದರು. ನಂತರ ಪೂರ್ಣಕುಂಭ ಹೊತ್ತ ಮಹಿಳೆಯರು , ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಿಡಿದು ಗೌರವ ಸಲ್ಲಿಸಿದರು.

ಬಳಿಕ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ ಮಾತನಾಡಿ, ಸಂವಿಧಾನ ಅಂಗೀಕಾರಗೊಂಡು 75 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಜಾಗೃತಿ ಜಾಥಾ ಹಮ್ಮಿಕೊಂಡಿರುವುದು ಸ್ವಾಗತಾರ್ಹ ವಿಚಾ ಎಂದರು.

ಅಂಬೇಡ್ಕರ್‌ರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ಅತ್ಯುನ್ನತ ಕಾನೂನು ಗ್ರಂಥವಾಗಿದೆ. ಪ್ರಸ್ತುತ ಮತ್ತು ಮುಂದಿನ
ಪೀಳಿಗೆಗೆ ರಚನೆಯಾಗಿರುವ ಪವಿತ್ರ ಗ್ರಂಥ ಇದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಸಿದ್ದರಾಜ್, ಹೆಗ್ಗಂದೂರು ಗ್ರಾಮ ಪಂಚಾಯಿತಿ ಪಿಡಿಒ ಎಚ್.ಎಂ.ಪ್ರತಿಭಾ. ಉಪಾಧ್ಯಕ್ಷೆ ನಾಗರತ್ನಾ ಬಾಲಸುಂದರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net