ಕೆಂಪೇಗೌಡ ರಥಕ್ಕೆ ಚಾಮುಂಡಿಬೆಟ್ಟದಲ್ಲಿ ಸ್ವಾಗತ

11
Published on

ಮೈಸೂರು: ನಾಡಪ್ರಭು ಕೆಂಪೇಗೌಡ ಅವರ ಕಂಚಿನ ಪ್ರತಿಮೆ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕೆ(ಮಣ್ಣು) ಸಂಗ್ರಹಿಸಲು ಮೈಸೂರಿಗೆ ಆಗಮಿಸಿರುವ ಕೆಂಪೇಗೌಡ ರಥವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಚಾಮುಂಡಿ ಬೆಟ್ಟದಲ್ಲಿ ಪೂರ್ಣ ಕುಂಭದೊಂದಿಗೆ ಸ್ವಾಗತಿಸಿದರು.


ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನ.11ರಂದು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಉದ್ಯಾನಕ್ಕೆ ಜಿಲ್ಲೆಯ ನಾನಾ ಭಾಗಗಳಿಂದ ಪವಿತ್ರ ಮಣ್ಣು ಸಂಗ್ರಹಿಸಲಾಗುತ್ತದೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದು ಸಚಿವರು ಹೇಳಿದರು.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ನಿಗಮ-ಮಂಡಳಿಗಳ ಅಧ್ಯಕ್ಷರು, ಮುಖಂಡರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net