ನೂತನ ಸಂಸದರಿಗೆ ಜೆಡಿಎಸ್‌ನಿಂದ ಸ್ವಾಗತ

jds
Published on

ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ ಅವರನ್ನು ಎನ್‌ಡಿಎ ಮಿತ್ರ ಪಕ್ಷ ಜಾತ್ಯತೀತ ಜನತಾದಳದ ಪ್ರಮುಖರು ಮೂರ್ನಾಡಿನಲ್ಲಿ ಆತ್ಮೀಯವಾಗಿ ಬರ ಮಾಡಿಕೊಂಡರು.


ಹೂವಿನ ಹಾರ ಹಾಕಿ, ಅಭಿನಂದನೆ ಸಲ್ಲಿಸಿ ಗೆಲುವಿನ ಸಂಭ್ರಮವನ್ನು ಹಂಚಿಕೊಂಡರು. ತಮ್ಮ ಗೆಲುವಿಗಾಗಿ ಶ್ರಮಿಸಿದ ಜೆಡಿಎಸ್ ಹಾಗೂ ಬಿಜೆಪಿ ಪ್ರಮುಖರಿಗೆ ಸಂಸದ ಯದುವೀರ್ ಅವರು ಕೃತಜ್ಞತೆ ಸಲ್ಲಿಸಿದರು. ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಬದ್ಧನಾಗಿರುವುದಾಗಿ ಭರವಸೆ ನೀಡಿದರು.


ಈ ಸಂದರ್ಭ ಕೊಡಗು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಮೂರ್ನಾಡು, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಬಲ್ಲಚಂಡ ಗೌತಮ್, ಮೂರ್ನಾಡು ವಲಯಾಧ್ಯಕ್ಷ ಶರತ್ ಕುಂತೋಡಿ, ನಗರಾಧ್ಯಕ್ಷ ಗಣೇಶ್ ಮತ್ತಿತರ ಪ್ರಮುಖರು, ಕಾರ್ಯಕರ್ತರು ಹಾಗೂ ಬಿಜೆಪಿ ಪದಾಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net