ಧರ್ಮಸ್ಥಳದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಸ್ವಾಗತ

New Project
Published on

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮ ಗುರುವಾರ ಜರುಗಿತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಚೆಕ್‌ಗಳನ್ನು ವಿತರಿಸಿದರು. ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ನಬಾರ್ಡ್ ಬ್ಯಾಂಕ್ ಅಧ್ಯಕ್ಷ ಶಾಜಿ ಕೆ.ವಿ., ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮೊದಲು ನಿರ್ಮಲಾ ಸೀತಾರಾಮನ್ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅವರನ್ನು ಕ್ಷೇತ್ರದ ವತಿಯಿಂದ ಗೌರವಿಸಿ ಪ್ರಸಾದ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net