ಏಕೀಕೃತ ಪಿಂಚಣಿ ಯೋಜನೆಗೆ ಸ್ವಾಗತ

h25-sandeep budihal
Published on

ಹುಬ್ಬಳ್ಳಿ: ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದನ್ನು ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾಸಂಘ (ಎಬಿಆರ್‌ಎಸ್‌ಎಂ) ಅಂಗ ಸಂಸ್ಥೆ ಮಾಧ್ಯಮಿಕ ಶಿಕ್ಷಕ ಸಂಘ ಸ್ವಾಗತಿಸಿದೆ.
ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್) ಅಡಿ ಶಿಕ್ಷಕರು ಮತ್ತು ಇತರ ಉದ್ಯೋಗಿಗಳು ಎದುರಿಸುತ್ತಿರುವ ಅನಿಶ್ಚಿತತೆಗಳನ್ನು ಏಕೀಕೃತ ಪಿಂಚಣಿ ಯೋಜನೆಯು ಪರಿಹರಿಸುತ್ತದೆ ಎಂದು ಎಬಿಆರ್‌ಎಸ್‌ಎಂ ಅಧ್ಯಕ್ಷ ಪ್ರೊ. ಜೆ.ಪಿ. ಸಿಂಘಾಲ್ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ. ಕನಿಷ್ಠ 25 ವರ್ಷಗಳ ಸೇವೆ ಪೂರ್ಣಗೊಳಿಸಿದ ಉದ್ಯೋಗಿಗಳಿಗೆ ಈ ಯೋಜನೆಯು ಪಿಂಚಣಿಯನ್ನು ಖಾತರಿಪಡಿಸುತ್ತದೆ. ಕುಟುಂಬಗಳಿಗೆ ಆರ್ಥಿಕ ಭದ್ರತೆ ಖಾತ್ರಿಗೊಳಿಸುತ್ತದೆ ಎಂದು ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಅಧ್ಯಕ್ಷ ಸಂದೀಪ ಬೂದಿಹಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net