

ಬೆಳ್ತಂಗಡಿ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ನಡೆಯಿತು.
ಶಾಲಾ ವಿದ್ಯಾರ್ಥಿಗಳನ್ನು ಬ್ಯಾಂಡ್ ಸೆಟ್‌ನೊಂದಿಗೆ ಗುಲಾಬಿ ಹೂವನ್ನು ನೀಡಿ ಸ್ವಾಗತಿಸಲಾಯಿತು. ಕುವೆಟ್ಟು ಗ್ರಾಪಂ ಸದಸ್ಯ ಸಿಲ್ವೆಸ್ಟರ್ ಮೋನಿಸ್ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ.ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು. ಕುವೆಟ್ಟು ಗ್ರಾಪಂ ಸದಸ್ಯೆ ಅಮೀನಾ, ಮುಖ್ಯ ಶಿಕ್ಷಕ ಭಾಸ್ಕರ್, ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕಿ ಶಶಿಕಲಾ ನಿರೂಪಿಸಿದರು. ಶಿಕ್ಷಕ ಕಿರಣ್ ಎಸ್.ಪಿ. ವಂದಿಸಿದರು. ಶಿಕ್ಷಣ ಇಲಾಖೆಯಿಂದ ನೀಡಿದ ಉಚಿತ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.