

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತದ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುವುದು ಭಾಗ್ಯ. ಪ್ರಸಾದ ಭೋಜನ ಸೇರಿದಂತೆ ಅಧ್ಯಾಯನಕ್ಕೆ ಬೇಕಾದ ಸಕಲ ಸೌಕರ್ಯಗಳು ದೇವರ ಕೃಪೆಯಾಗಿದೆ. ವಿದ್ಯಾರ್ಥಿಗಳು ಶಿಸ್ತು ಮತ್ತು ಶ್ರಮದಿಂದ ಅಧ್ಯಯನ ಮಾಡಿ ಉನ್ನತಿ ಸಾಧಿಸಬೇಕು ಎಂದು ಎಸ್‌ಎಸ್‌ಪಿಯು ಕಾಲೇಜು ಪ್ರಾಚಾರ್ಯ ಸೋಮಶೇಖರ ನಾಯಕ್ ಹೇಳಿದರು.
ಎಸ್‌ಎಸ್‌ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖ್ಯಗುರು ನಂದಾ ಹರೀಶ್, ಹಿರಿಯ ಸಹ ಶಿಕ್ಷಕ ಎಂ.ಕೃಷ್ಣ ಭಟ್, ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ವೆಂಕಟೇಶ್ ಎಚ್.ಎಲ್., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್. ಮುಖ್ಯ ಅತಿಥಿಗಳಾಗಿದ್ದರು. ಸಾಂಸ್ಕೃತಿಕ ಸಂಘದ ಸಂಚಾಲಕಿ ರೇಖರಾಣಿ ಸೋಮಶೇಖರ್, ವಿದ್ಯಾರ್ಥಿ ಸರ್ಕಾರದ ಸಂಚಾಲಕ ಜಯಪ್ರಕಾಶ್ ಆರ್., ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ಉಪನ್ಯಾಸಕರಾದ ಜಯಶ್ರೀ ವಿ.ದಂಬೆಕೋಡಿ, ಗಿರೀಶ್, ಶ್ರೀಧರ್ ಪುತ್ರನ್, ಮನೋಜ್ ಕುಮಾರ್ ಬಿ.ಎಸ್., ಜ್ಯೋತಿ ಪಿ.ರೈ, ಯೋಗಣ್ಣ ಎಂ.ಎಸ್., ಸವಿತಾ ಕೈಲಾಸ್, ಸುಧಾ, ಪೂರ್ಣಿಮಾ, ಪ್ರವೀಣ್ ಎರ್ಮಾಯಿಲ್, ಸೌಮ್ಯಾ ದಿನೇಶ್, ಶ್ರುತಿ ಅಶ್ವಥ್, ಭವ್ಯಶ್ರೀ ಕುಲ್ಕುಂದ, ಸೌಮ್ಯಕೀರ್ತಿ, ಮಾನಸ ಭಟ್, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಲೋಕೇಶ್ ಬಿ.ಎನ್., ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.
ಆಕರ್ಷಕ ಸಮಾರಂಭ: ಆರಂಭದಲ್ಲಿ ಆಕರ್ಷಕ ಪಟಾಕಿಗಳ ಮೂಲಕ ಸ್ವಾಗತ ಫಲಕ ಅನಾವರಣವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್. ನೆರವೇರಿಸಿದರು. ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷ ವೆಂಕಟೇಶ್ ಎಚ್.ಎಲ್. ಹಾಗೂ ಹಿರಿಯ ಸಹಶಿಕ್ಷಕ ಎಂ.ಕೃಷ್ಣ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿನಿ ಭೂಮಿಕಾ ದೇವರಗದ್ದೆ ನಿರೂಪಿಸಿದರು. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಿದ್ಯಾರ್ಥಿಗಳು, ಘಟಕದ ನಾಯಕರಾದ ಸವಿತಾ ಕೈಲಾಸ್ ಮತ್ತು ಪ್ರವೀಣ್ ಎರ್ಮಾಯಿಲ್ ನಿರ್ದೇಶನದಲ್ಲಿ ಕಾರ್ಯಕ್ರಮ ಸಂಘಟಿಸಿದ್ದರು.