

ಶಿಗ್ಗಾಂವಿ: ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಕಟ್ಟಡದಿಂದ ಕೆಳಗೆ ಬಿದ್ದು ಕಾಮಿರ್ಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ತಡಸ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಉತ್ತರ ಕನ್ನಡ ಜಿಲ್ಲೆ ಮುಂಡಗೋಡದ ಪರಶುರಾಮ ಹನುಮಂತಪ್ಪ ಭಜಂತ್ರಿ (40) ಮೃತ ಕಾಮಿರ್ಕ.
ಈತ ತಡಸ ಗ್ರಾಮದಲ್ಲಿ ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.