ಪಿಯು ವಿದ್ಯಾರ್ಥಿಗಳಿಗೆ ಸಂಭ್ರಮದ ಸ್ವಾಗತ

IMG-20250301-WA0022-1.jpg
Published on

ಹುಬ್ಬಳ್ಳಿ: ಇಲ್ಲಿಯ ಕನಕದಾಸ ಶಿಕ್ಷಣ ಸಮಿತಿಯ ವಿಜಯನಗರ ಪಿಯು ಕಾಲೇಜಿನಲ್ಲಿ ಶನಿವಾರ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳನ್ನು ಗುಲಾಬಿ ಹೂ ನೀಡುವುದರ ಮೂಲಕ ಸ್ವಾಗತಿಸಲಾಯಿತು. ಧೈರ್ಯದಿಂದ ಪರೀಕ್ಷೆ ಎದುರಿಸುವಂತೆ ಹುರಿದುಂಬಿಸಲಾಯಿತು. ಸಂಸ್ಥೆಯ ಕಾರ್ಯಾಧ್ಯಕ್ಷ ರವೀಂದ್ರನಾಥ ದಂಡಿನ, ಪ್ರಾಚಾರ್ಯ ಸಂದೀಪ ಬೂದಿಹಾಳ ಮತ್ತು ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net