ಸರ್ವಕ್ಷೇಮ ಯೋಗಬನದಲ್ಲಿ ತಪಾಸಣಾ ಶಿಬಿರ

yogabana
ಕೋಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಾಧವ ಪೈ ಉದ್ಘಾಟಿಸಿದರು.
Published on

ಕೋಟ: ಇಲ್ಲಿನ ಮೂಡುಗಿಳಿಯಾರು ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನ, ಯೋಗಬನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೋಟ ಸಮುದಾಯ ಆರೋಗ್ಯ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಉಚಿತವಾಗಿ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಕ್ಯಾನ್ಸರ್ ತಪಾಸಣಾ ಶಿಬಿರ ಸೋಮವಾರ ಜರುಗಿತು.

ಕಾರ್ಯಕ್ರಮವನ್ನು ಕೋಟ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ಮಾಧವ ಪೈ ಉದ್ಘಾಟಿಸಿ ಆರೋಗ್ಯದ ಕುರಿತು ಸಮಗ್ರ ಮಾಹಿತಿ ನೀಡಿದರು.

ಯೋಗಬನ ಸಹಾಯಕ ನಿರ್ದೇಶಕ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಟ ಸಮುದಾಯ ಆರೋಗ್ಯ ಕೇಂದ್ರ ಎನ್‌ಎಸ್‌ಡಿ ವಿಭಾಗದ ಡಾ.ಯಶಶ್ರೀ ಶೆಟ್ಟಿ, ದಂತವೈದ್ಯೆ ಡಾ.ಅನಾಲಿನಿ, ಯೋಗಬನ ಸಹಾಯ ನಿರ್ದೇಶಕ ಷಣ್ಮುಖ ಕುತ್ಯಾಳ ಉಪಸ್ಥಿತರಿದ್ದರು. ಶಿಬಿರದಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ತಪಾಸಣೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net