ಪಶ್ವಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ಕ್ರೌರ್ಯ; ಬಿಜೆಪಿ ಕಾರ್ಯಕರ್ತರ ಮೌನ ಪ್ರತಿಭಟನೆ

0505 Raichur BJP Protest
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಬುಧವಾರ ಬಿಜೆಪಿ ಪ್ರತಿಭಟನೆ ನಡೆಸಿತು.
Published on

ರಾಯಚೂರು: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿರುವುದನ್ನು ಖಂಡಿಸಿ ಪಕ್ಷದಿಂದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಬುಧವಾರ ಮೌನ ಪ್ರತಿಭಟನೆ ನಡೆಸಲಾಯಿತು.

ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸಿದ್ದು, ಕಾರ್ಯಕರ್ತರ ಮನೆಗಳಿಗೆ ನುಗ್ಗಿ ಹಲ್ಲೆ ನಡೆಸುತ್ತಿದ್ದಾರೆ. ಪೊಲೀಸರು ಈ ದೌರ್ಜನ್ಯ ತಡೆಯುವಲ್ಲಿ ವಿಫಲವಾಗಿದ್ದಾರೆ. ಅಲ್ಲಿನ ಸರ್ಕಾರ ಸರ್ವಾಧಿಕಾರಿ ಧೋರಣೆ ಪ್ರದರ್ಶಿಸುತ್ತಿದೆ. ಚುನಾವಣೆ ಗೆದ್ದ ನಂತರ ಪಶ್ಚಿಮ ಬಂಗಾಲದಲ್ಲಿ ಟಿಎಂಸಿ ಕಾರ್ಯಕರ್ತರ ಪುಂಡಾಟ ಹೆಚ್ಚಾಗುತ್ತಿದೆ. ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಆಕ್ರಮಣ ನಡೆಸಲಾಗುತ್ತಿದೆ. ರಾಜ್ಯಪಾಲರು ಕೂಡಲೇ ಅದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಪದಾಧಿಕಾರಿಗಳಾದ ಮಹೇಶ ಕಲ್ಲೂರ್, ನಾಗನಗೌಡ ನೆಲಹಾಳ, ಎಂ.ಮಾರೆಪ್ಪ, ಎಸ್.ರಾಮು, ಅಫ್ರೋಜುದ್ದೀನ್, ಹನೀಫ್ ಶೇಖ್, ಶ್ರೀನಿವಾಸ್, ನಾಗೇಶ್ವರರಾವ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net