ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಮನವಿ

Padavidhara
Published on

ಕಾರವಾರ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ-2026ಕ್ಕೆ ಸಂಬಂಧಿಸಿದಂತೆ, ಮತದಾರರ ಪಟ್ಟಿ ತಯಾರಿಕೆ ಹಾಗೂ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡುವ ಪ್ರಕ್ರಿಯೆಯು ನವೆಂಬರ್ 6 ರವರೆಗೆ ಚಾಲ್ತಿಯಲ್ಲಿರುತ್ತದೆ.ಉತ್ತರ ಕನ್ನಡ ಜಿಲ್ಲೆಯಲ್ಲಿ, 1 ನೇ ನವೆಂಬರ 2025 ಕ್ಕೆ ಮುಂಚೆ ಕನಿಷ್ಠ 3 ವರ್ಷಗಳಷ್ಟು ಮೊದಲು, ಭಾರತದಲ್ಲಿರುವ ಯಾವುದಾದರೊಂದು ವಿಶ್ವವಿದ್ಯಾಲಯದ ಪದವೀಧರನಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಯೂ ನವೆಂಬರ್ 6 ರೊಳಗಾಗಿ ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ನಮೂನೆ-18 ರಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಪದವಿ ಪ್ರಮಾಣ ಪತ್ರಗಳನ್ನು ಪತ್ರಾಂಕಿತ ಅಧಿಕಾರಿಯ ಮೇಲುರುಜು ಮಾಡಿಸಿ, ವಿಳಾಸದ ದಾಖಲೆಗಾಗಿ ಮತದಾರರ ಗುರುತಿನ ಚೀಟಿ, ಆಧಾರ ಕಾರ್ಡ, ರೇಷನ್ ಕಾರ್ಡ, ಇಂಡಿಯನ್ ಪಾಸಪೋರ್ಟ ಮತ್ತು ಡ್ರೈವಿಂಗ್ ಲೈಸನ್ಸ್ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ಮತದಾರರ ನೋಂದಣಾಧಿಕಾರಿ ಅಥವಾ

ಗೊತ್ತುಪಡಿಸಿದ ಅಧಿಕಾರಿಗಳಲ್ಲಿ ಸಲ್ಲಿಸಿ, ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು

ನೋಂದಣಿ ಮಾಡಿಕೊಳ್ಳುವಂತೆ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ

ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net