ಯಾವ ಖಾತೆ ಕೊಟ್ಟರೂ ನಿಭಾಯಿಸುವೆ - ಉಮೇಶ ಕತ್ತಿ

BJP - Umesh Katti
Published on

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನನಗೂ ಸಚಿವ ಸ್ಥಾನ ನೀಡಲು ಮುಂದಾಗಿರುವುದು ಖುಷಿ ತಂದಿದೆ. ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ರಾಜ್ಯದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಹುಕ್ಕೇರಿ ಶಾಸಕ ಉಮೇಶ ಕತ್ತಿ ಪ್ರತಿಕ್ರಿಯಿಸಿದ್ದಾರೆ.

ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಇದೇ ಖಾತೆ ನೀಡಬೇಕೆಂದು ಬೇಡಿಕೆ ಇಟ್ಟಿಲ್ಲ. ಸರ್ಕಾರ ನನಗೆ ವಹಿಸುವ ಕೆಲಸ ಸರಿಯಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು. ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವುದಾಗಿ ಈ ಹಿಂದೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಈಗ ನಡೆದುಕೊಳ್ಳುತ್ತಿದ್ದಾರೆ. ಆದರೆ, ಸೋತವರಿಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net