ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧೆ ಕುರಿತು ಶಾಸಕ ದರ್ಶನ್ ಧ್ರುವನಾರಾಯಣ ಪ್ರತಿಕ್ರಿಯೆ ಏನು?

mysore
Published on

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಕುರಿತು ಶಾಸಕ ದರ್ಶನ್ ಧ್ರುವನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ರಾಜಕೀಯ ಕ್ಷೇತ್ರ ಬಯಸಿದವನಲ್ಲ. ನನ್ನ ತಂದೆಯ ಸಾವಿನ ನಂತರ ಅನಿವಾರ್ಯ ಕಾರಣದಿಂದ ರಾಜಕೀಯಕ್ಕೆ ಬಂದಿದ್ದು, ನಂಜನಗೂಡು ಕ್ಷೇತ್ರದ ಜನತೆ ನನ್ನ ಕೈ ಹಿಡಿದಿದ್ದಾರೆ. ಕಷ್ಟದ ಸಮಯದಲ್ಲಿ ನನ್ನ ಬೆನ್ನಿಗೆ ನಿಂತಿದ್ದಾರೆ. 5 ವರ್ಷಗಳ ಕಾಲ ನನ್ನ ಕ್ಷೇತ್ರದ ಜನತೆಯ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು

ಗ್ಯಾರಂಟಿಯಿಂದ ಜನರ ಆರ್ಥಿಕ ಮಟ್ಟ ಸುಧಾರಣೆ


ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನೇಕ ಜನಪರ ಯೋಜನೆಗಳನ್ನು ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಜೀವನ ಮಟ್ಟ ಸುಧಾರಣೆಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಷಿತ ಸಮುದಾಯಕ್ಕೆ ನ್ಯಾಯ ಕೊಟ್ಟ ನಾಯಕ ಎಂದು ತಿಳಿಸಿದರು.


ರಾಜ್ಯ ಸರ್ಕಾರ ಸದಾಶಿವ ಆಯೋಗ ವರದಿ ಜಾರಿಗೆ ಮುಂದಾಗಿದ್ದು, ಸರ್ಕಾರ ಸಲ್ಲಿಸಿರುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net