

ಮಡಿಕೇರಿ:
ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆ ಆತ್ಮವಿಶ್ವಾಸವನ್ನು ಹೆಚ್ಚಿಸಿ ಬದುಕನ್ನು ರಚನಾತ್ಮಕವಾಗಿ ಕಟ್ಟಿಕೊಳ್ಳಲು ಸಹಕರಿಸುತ್ತದೆ ಎಂದು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಹೇಳಿದರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮತ್ತು ಸಮಾಜ ಕಾರ್ಯ ವಿಭಾಗದ ಸಹಯೋಗದಲ್ಲಿ ಶನಿವಾರ ಚೇರಂಬಾಣೆಯ ಅರುಣ ಪಿಯು ಕಾಲೇಜಿನಲ್ಲಿ ನಡೆದ ಪಿಯುಸಿ ನಂತರದ ಅವಕಾಶಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯ ನಂತರ ಇರುವ ಶೈಕ್ಷಣಿಕ ಅವಕಾಶಗಳು ಮತ್ತು ಉದ್ಯೋಗ ಆಧಾರಿತ ಶಿಕ್ಷಣದ ಕುರಿತು ಮಾಹಿತಿ ನೀಡಿದ ಅವರು ಎಲ್ಲರ ಬಳಿ ಸುಲಭವಾಗಿ ಲಭ್ಯವಿರುವ ಮೊಬೈಲ್ ಅನ್ನು ಶೈಕ್ಷಣಿಕ ಮತ್ತು ಔದ್ಯೋಗಿಕ ಮಾಹಿತಿ ಪಡೆಯುವ ಸಲುವಾಗಿ ಕೂಡ ಬಳಸಿಕೊಂಡರೆ ಮೊಬೈಲ್‌ನಿಂದ ಉಪಯೋಗವೂ ಇದೆ ಎಂದು.
ಬೇಂಗೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮಣ್ಣ ಬಡ್ಡೀರ, ಮುಖ್ಯೋಪಾಧ್ಯಾಯ ಬಾಲಕೃಷ್ಣ, ಚೇರಂಬಾಣೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಮನ್, ಪ್ರಾಂಶುಪಾಲ ಡಿ.ಎಸ್. ರಾಮಕೃಷ್ಣ ಮಾತನಾಡಿದರು. ಸಮಾಜ ಕಾರ್ಯ ವಿದ್ಯಾರ್ಥಿಗಳಾದ ಪ್ರಜೀತ್, ಇಂಚರ, ರುನೈರ್, ಓಶಿನ್ ಸೋಶಿಯಲ್ ವರ್ಕ್ ಕೋರ್ಸ್ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಣೆ ನೀಡಿದರು.