

ಬೆಳ್ತಂಗಡಿ : ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ಮನೆ ನಿವಾಸಿ ಪದ್ಮನಾಭ ಕುಂಬಾರ ಎಂಬುವವರಿಗೆ ವೀಲ್‌ಚೇರ್ ಹಸ್ತಾಂತರಿಸಲಾಯಿತು.ಪದ್ಮನಾಭ ಕುಂಬಾರ 15 ವರ್ಷದಿಂದ ಬೆನ್ನುಮೂಳೆ ಮುರಿತದಿಂದ ಬಳಲಿತ್ತಿದ್ದಾರೆ. ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ರಾಜ ಕೇಸರಿ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಗುರುವಾಯನಕೆರೆ, ಉಜಿರೆ ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ವಿಪುಲ್ ಪೂಜಾರಿ, ಇಳಂತಿಲ ಗ್ರಾಮ ಪಂಚಾಯಿತಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ರಾಧಿಕ ಉಪಸ್ಥಿತರಿದ್ದರು.