ಪದೇಪದೆ ರಸ್ತೆ ಅಗೆದರೆ ಹಣ ಎಲ್ಲಿಂದ ಬರುತ್ತದೆ?

new abbayya
Published on

ಹುಬ್ಬಳ್ಳಿ: ಅಭಿವೃದ್ಧಿ ಕಾಮಗಾರಿ ಹೆಸರಲ್ಲಿ ಸುಸಜ್ಜಿತ ರಸ್ತೆಗಳನ್ನು ಅಗೆದು ಹಾಳು ಮಾಡಿದರೆ ರಸ್ತೆ ನಿಮಾಣಕ್ಕೆ ಪದೇಪದೆ ದುಡ್ಡು ಎಲ್ಲಿಂದ ಬರುತ್ತದೆ? ಕಾಮಗಾರಿಗೂ ಮೊದಲು ವಿಸõತ ಯೋಜನೆ ರೂಪಿಸಿಬೇಕೆ ಹೊರತು, ಬೇಕಾಬಿಟ್ಟಿ ಕಾಮಗಾರಿ ಕೈಗೊಂಡು ದುಡ್ಡು ಪೋಲು ಮಾಡುವುದನ್ನು ಸಹಿಸುವುದಿಲ್ಲ ಎಂದು ಶಾಸಕ ಪ್ರಸಾದ ಅಬ್ಬಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ 77ನೇ ವಾರ್ಡ್​ನ ಇಸ್ಲಾಂಪುರ ಮುಖ್ಯರಸ್ತೆಯಲ್ಲಿ ನಡೆದಿರುವ ಒಳಚರಂಡಿ ಅಭಿವೃದ್ಧಿ ಕಾಮಗಾರಿಯನ್ನು ಬುಧವಾರ ಪರಿಶೀಲಿಸಿದ ಶಾಸಕ ಅಬ್ಬಯ್ಯ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ರಸ್ತೆ ಅಭಿವೃದ್ಧಿ ಪಡಿಸುವ ಮೊದಲೇ ಒಳಚರಂಡಿ, ನೀರಿನ ಸಂಪರ್ಕ, ವಿದ್ಯುತ್ ಸಂಪರ್ಕ ಸೇರಿದಂತೆ ಇತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಅಗತ್ಯ ಮುಂಜಾಗೃತ ಕ್ರಮ ಕೈಗೊಂಡ ನಂತರ ರಸ್ತೆ ನಿಮಾಣ ಮಾಡಬೇಕು. ಅಧಿಕಾರಿಗಳ ನಿರ್ಲಕ್ಷ್ಯಂದ ಒಳಚರಂಡಿ ಅಳವಡಿಸಲು ಸುಸಜ್ಜಿತ ರಸ್ತೆ ಅಗೆಯುವ ಪರಿಸ್ಥಿತಿ ನಿಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಿರ್ವಿುಸಿರುವ ರಸ್ತೆಯನ್ನೇ ಎಷ್ಟು ಬಾರಿ ಅಭಿವೃದ್ಧಿ ಪಡಿಸುವುದು ಮತ್ತು ಪದೇಪದೆ ಅನುದಾನ ಎಲ್ಲಿಂದ ತರುವುದು? ಎಂದು ಅಧಿಕಾರಿಗಳಿಗೆ ಪ್ರಶ್ನೆ ಮಾಡಿದರು.

ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಅಗೆದಿರುವ ರಸ್ತೆಯನ್ನು ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಸುಗಮಗೊಳಿಸಬೇಕು. ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕೆಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ಪಾಲಿಕೆ ಮತ್ತು ಸ್ಮಾರ್ಟ್​ಸಿಟಿ ಅಧಿಕಾರಿಗಳು, ಪಾಲಿಕೆ ಸದಸ್ಯರು, ಗುತ್ತಿಗೆದಾರರು, ಸ್ಥಳೀಯ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net