

ಮಾಂಜರಿ: ಸಮೀಪದ ಅಂಕಲಿ ಗ್ರಾಮದಲ್ಲಿರುವ ಕೆಎಲ್ಇ ಸಂಸ್ಥೆಯ ಎಸ್.ಸಿ.ಪಾಟೀಲ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ 2024-25ನೇ ಸಾಲಿನ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭ ಜರುಗಿತು.
ಶಿಕ್ಷಕ ಸಿದ್ಧಪ್ಪ ಮಗದುಮ್ಮ ಮಾತನಾಡಿ, ಮಕ್ಕಳು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ವಿದ್ಯಾರ್ಥಿ ಜೀವನ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಸ್ಥಾನಿಕ ಆಡಳಿತ ಮಂಡಳಿ ಚೇರ್ಮನ್ ಬಸವರಾಜ ಕೋರೆ ವಹಿಸಿದ್ದರು. ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಕುಮಾರ ಕೋರೆ ಉದ್ಘಾಟಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯರಾದ ಅಣ್ಣಾಸಾಹೇಬ ಜಕಾತೆ, ತುಕಾರಾಮ ಪಾಟೀಲ, ವಿಶ್ವನಾಥ ನಷ್ಠೆ, ಕೆಎಲ್ಇ ಸಂಸ್ಥೆಯ ಆಜೀವ ಸದಸ್ಯ ಬಿ.ಎಸ್.ಅಂಬಿ, ಪ್ರಾಚಾರ್ಯ ಪಿ.ಎನ್.ತಳವಾರ ಇತರರು ಇದ್ದರು.
ಎಸ್.ಜಿ.ಹಿರೇಮಠ ಸ್ವಾಗತಿಸಿದರು. ಕುಮಾರ ಕೋಳಿ ವಂದಿಸಿದರು. ಬಿ.ಎಸ್.ಜಕಾತಿ ನಿರೂಪಿಸಿದರು.