ಶಿಕ್ಷಣ ವ್ಯಾಪಾರೀಕರಣ ಆಗದಿರಲಿ

10 Ylb01
ಯಲಬುರ್ಗಾದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಶಾಸಕ ಬಸವರಾಜ ರಾಯರಡ್ಡಿ ಉದ್ಘಾಟಿಟಿಸಿದರು. ಪ್ರಮುಖರಾದ ಬಸವರಾಜ ಉಳ್ಳಾಗಡ್ಡಿ, ಶರಣಬಸನಗೌಡ, ವೀರಭದ್ರಪ್ಪ ಅಂಗಡಿ, ಎಸ್.ವಿ.ಧರಣಾ ಇದ್ದರು.
Published on

ಯಲಬುರ್ಗಾ: ರಾಷ್ಟ್ರದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದು. ಗುರುಗಳು ಮಕ್ಕಳಿಗೆ ಅಕ್ಷರದ ಜತೆಗೆ ವಿಚಾರ-ವಿವೇಕ ಕಲಿಸಬೇಕು ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ಪಟ್ಟಣದ ಬುದ್ಧ ಬಸವ ಅಂಬೇಡ್ಕರ್ ಭವನದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ಅಂಗವಾಗಿ ಶಿಕ್ಷಣ ಇಲಾಖೆ ಮಂಗಳವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಹಾಗೂ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿದರು.

ಮಕ್ಕಳಿಗೆ ತಾಯಿ ಆಚಾರ ವಿಚಾರ ಕಲಿಸಿದರೆ ಶಿಕ್ಷಕರು ವಿದ್ಯೆ ಧಾರೆಯೆರೆಯುತ್ತಾರೆ. ವಿದ್ಯೆ ಇಲ್ಲದೆ ಬದುಕು ದುಸ್ತರ. ಶಿಕ್ಷಣ ಕ್ಷೇತ್ರ ಬೆಳೆದಿದ್ದರಿಂದಲೇ ಮನುಷ್ಯ ನಾಗರಿಕನಾಗಿ ಬಾಳುತ್ತಿದ್ದಾನೆ. ಶಿಕ್ಷಕ ವೃತ್ತಿ ಪವಿತ್ರವಾಗಿದ್ದು, ವ್ಯಾಪಾರೀಕರಣ ಆಗಬಾರದು. ಅದನ್ನು ಪ್ರಾಮಾಣಿಕತೆಯಿಂದ ನಿಭಾಯಿಸಬೇಕು ಎಂದರು.

ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರ ಸಾಕಷ್ಟು ಸುಧಾರಣೆಯಾಗಿದೆ. ಸಾಕ್ಷರತೆ ಪ್ರಮಾಣ ಹೆಚ್ಚಾಗಿದೆ. ತಾಲೂಕಿನಲ್ಲಿ ಫಲಿತಾಂಶ ಉತ್ತಮ ರೀತಿಯಲ್ಲಿದೆ. ಕ್ಷೇತ್ರದಲ್ಲಿ ಎಲ್‌ಕೆಜಿಯಿಂದ ಪಿಜಿವರೆಗೆ ಶಿಕ್ಷಣ ಸಿಗುವಂತೆ ಆದ್ಯತೆ ನೀಡಲಾಗಿದೆ. ಇಂಗ್ಲಿಷ್ ಶಿಕ್ಷಣಕ್ಕೆ ಪ್ರೋತ್ಸಾಹಿಸುವುದಿಲ್ಲ. ಆಂಗ್ಲ ಮಾಧ್ಯಮದಲ್ಲಿ ಓದಿದರೆ ಮಕ್ಕಳು ಬುದ್ಧಿವಂತರಾಗುತ್ತಾರೆ ಎನ್ನುವುದು ಭ್ರಮೆ. ಪಾಲಕರು ಮಕ್ಕಳನ್ನು ಕನ್ನಡ ಶಾಲೆಗೆ ಸೇರಿಸುವ ಮೂಲಕ ಗುಣಾತ್ಮಕ ಶಿಕ್ಷಣ ಕೊಡಿಸಬೇಕು. ಸ್ಪರ್ಧೆಯಲ್ಲಿ ಮುಂದೆ ಬರಲು ಓದಬೇಕು. ಕಷ್ಟ ಪಡಬೇಕು ಎಂದು ಬಸವರಾಜ ರಾಯರಡ್ಡಿ ಹೇಳಿದರು.

ಇದೇ ವೇಳೆ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕೊಪ್ಪಳದ ಗವಿಸಿದ್ಧೇಶ್ವರ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಶರಣಬಸಪ್ಪ ಬಿಳೆಯಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಪ್ರಭಾರ ಬಿಇಒ ಅಶೋಕ ಗೌಡರ, ಪಪಂ ಮುಖ್ಯಾಧಿಕಾರಿ ನಾಗೇಶ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ವೈ.ಜಿ.ಪಾಟೀಲ್, ಮಹೇಶ ಸಬರದ,

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾದ ಎಸ್.ವಿ.ಧರಣಾ, ಮಾರುತೇಶ ತಳವಾರ್, ಪ್ರಮುಖರಾದ ವೀರನಗೌಡ ಬಳೂಟಗಿ, ಎ.ಜಿ.ಭಾವಿಮನಿ, ಯಂಕಣ್ಣ ಯರಾಶಿ, ಅಶೋಕ ತೋಟದ, ಶರಣಪ್ಪ ಗಾಂಜಿ, ಶಿವನಗೌಡ ದಾನರಡ್ಡಿ, ಅಖ್ತರ್‌ಸಾಬ್ ಖಾಜಿ, ಅಶೋಕ ಮಾಲಿಪಾಟೀಲ್, ಈಶಪ್ಪ ಮಳಗಿ, ಎಫ್.ಎಂ.ಕಳ್ಳಿ, ಟಿ.ಜೆ.ದಾನಿ, ಸಿದ್ದಲಿಂಗಪ್ಪ ಶ್ಯಾಗೋಟಿ, ಶೇಖರಗೌಡ ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net