ಜೆಡಿಎಸ್ ಸದಸ್ಯರಿಗೆ ವಿಪ್ ಜಾರಿ

SRP _ 30-01.
Published on

ಮಂಡ್ಯ: ಶ್ರೀರಂಗಪಟ್ಟಣ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಸದಸ್ಯರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತು ಜಿಲ್ಲಾಧ್ಯಕ್ಷ ಡಿ.ರಮೇಶ್ ವಿಪ್ ಜಾರಿಗೊಳಿಸಿದ್ದಾರೆ.
ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನ.6ರಂದು ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. 23 ಸದಸ್ಯ ಬಲದ ಪುರಸಭೆಯಲ್ಲಿ ಜೆಡಿಎಸ್ 12, ಕಾಂಗ್ರೆಸ್ 8, ಬಿಜೆಪಿ 1 ಹಾಗೂ ಇಬ್ಬರು ಪಕ್ಷೇತರರು ಆಯ್ಕೆಯಾಗಿದ್ದಾರೆ. ಹೆಚ್ಚು ಸದಸ್ಯರನ್ನು ಹೊಂದಿರುವ ಕಾರಣ ಜೆಡಿಎಸ್‌ಗೆ ಅಧಿಕಾರ ಸಿಗುವ ಸಾಧ್ಯತೆ ಇದ್ದರೂ, ಗದ್ದುಗೆ ಹಿಡಿಯಲು ಕಾಂಗ್ರೆಸ್ ಕೂಡ ಕಾರ್ಯತಂತ್ರ ರೂಪಿಸುತ್ತಿದೆ. ಈ ಮೂಲಕ ಹಾಲಿ-ಮಾಜಿ ಶಾಸಕರಿಗೆ ಪ್ರತಿಷ್ಠೆಯ ಕಣವಾಗಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದಲ್ಲಿ ಸಭೆ ಆಯೋಜಿಸಿ ಜೆಡಿಎಸ್ ಸದಸ್ಯರಿಗೆ ವಿಪ್ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net