

ಮೈಸೂರು: ನಟ ದರ್ಶನ್ ಅವರನ್ನು ರಕ್ಷಿಸಲು ನನ್ನ ಬಳಿ ಯಾರು ಸಹ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನಗರದಲ್ಲಿ ಶುಕ್ರವಾರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಬೇಕೂಂತ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನು ಪ್ರಕಾರ ನಡೆದುಕೊಳ್ಳುತ್ತಿದ್ದೇವೆ. ಕಾನೂನು ಬಿಟ್ಟು ಏನು ಮಾಡುವುದಿಲ್ಲ ಎಂದು ಹೇಳಿದರು.
ದರ್ಶನ್ ಪ್ರಕರಣದ ವಿಚಾರಣೆಗೆ ಠಾಣೆ ಸುತ್ತ ಶಾಮಿಯಾನ ಹಾಕುವ ಅವಶ್ಯಕತೆ ಏನಿತ್ತು ಎಂಬುದು ನನಗೆ ಗೊತ್ತಿಲ್ಲ. ಯಾವ ಕಾರಣಕ್ಕೆ ಪೊಲೀಸರು ಈ ತೀರ್ಮಾನ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಅವರು ನಮ್ಮನ್ನು ಕೇಳಿಕೊಂಡು ಕೈಗೊಂಡ ತೀರ್ಮಾನ ಅಲ್ಲ ಅದು. ಇದರಿಂದ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ ಎಂದು ಯಾರು ಸಹ ನನಗೆ ದೂರು ನೀಡಿಲ್ಲ ಎಂದು ಹೇಳಿದರು.