ಬಿಜೆಪಿಗೆ ಕೆಟ್ಟ ಹೆಸರು ತರಲು ಮಣಿಪುರ ಘಟನೆ ಸೃಷ್ಟಿ

MKG1A
Published on

ಹೊನ್ನಾಳಿ: ಕಳೆದ ಹಲವಾರು ದಿನಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ವ್ಯಾಪಕ ಹಿಂಸಾಚಾರಕ್ಕೆ ಅಲ್ಲಿನ ಕಾಣದ ಕೈಗಳು ಕೆಲಸ ಮಾಡುತ್ತಿದೆ. ಬಿಜೆಪಿಗೆ ಕೆಟ್ಟ ಹೆಸರು ತರಲು ಈ ಷಡ್ಯಂತ್ರ ನಡೆಯುತ್ತಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.

ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಕೇಂದ್ರ ಸರ್ಕಾರದ 9ನೇ ವರ್ಷದ ಸಾಧನೆ ಕರಪತ್ರ ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕಾರಣ ಯಾರು ಎಂದು ಶೀಘ್ರ ಬಿಜೆಪಿ ಸರ್ಕಾರ ಬಯಲಿಗೆ ಎಳೆಯಲಿದೆ. ಆದರೆ, ಅಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಪ್ರತಿಪಕ್ಷಗಳು ಪ್ರಚೋದನೆ ನೀಡುತ್ತಿವೆ ಎಂದು ಅವರು ಆರೋಪಿಸಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್ ಮಾತನಾಡಿ, ನಾವು ಹಿಂದುತ್ವದ ಜತೆ ಜತೆಯಲ್ಲೆ ಅಭಿವೃದ್ಧಿಗೂ ಹೆಚ್ಚು ಆದ್ಯತೆ ನೀಡಿದ್ದರಿಂದ ಮತದಾರರು 3ನೇ ಬಾರಿಗೂ ಕೇಂದ್ರದಲ್ಲಿ ಬಿಜೆಪಿಗೆ ಅವಕಾಶ ಕೊಡಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್‌ನ ಮುಖಂಡರು ನರೇಂದ್ರಮೋದಿ ವಿರುದ್ಧ ಎಷ್ಟೇ ಆರೋಪ ಮಾಡಿದರೂ ರಾಷ್ಟ್ರದ ಜನತೆ ನಂಬುವ ಸ್ಥಿತಿಯಲ್ಲಿ ಇಲ್ಲ. ಮೋದಿ ಇದ್ದರಷ್ಟೆ ದೇಶದ ಅಭಿವೃದ್ಧಿ ಎಂದು ಜನತೆಗೆ ಗೊತ್ತಾಗಿದೆ ಎಂದರು. ಮುಖಂಡರಾದ ಮಂಜುನಾಥ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net