ಸಮಗ್ರ ಅಧ್ಯಯನಕ್ಕಾಗಿ ಭಾರತಕ್ಕೆ ಡಬ್ಲ್ಯುಎಚ್​ಒ ವೈದ್ಯರು

WHO
Published on

ಬೆಳಗಾವಿ: ಭಾರತದಲ್ಲಿ ಕರೊನಾ ವೈರಸ್ ನಿಯಂತ್ರಣ, ಮುಂಜಾಗ್ರತಾ ಕ್ರಮ, ಜಾಗೃತಿ ಜತೆಗೆ ಆಹಾರ ಪದ್ಧತಿ ಇತರ ವಿಷಯಗಳ ಸಮಗ್ರ ಅಧ್ಯಯನಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಸಂಶೋಧನಾ ವಿಭಾಗದ ವೈದ್ಯಾಧಿಕಾರಿಗಳ ತಂಡ ಶೀಘ್ರದಲ್ಲೇ ಭಾರತಕ್ಕೆ ಆಗಮಿಸುತ್ತಿದೆ ಎಂದು ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ. ಎಸ್.ವಿ. ಮುನ್ಯಾಳ ತಿಳಿಸಿದ್ದಾರೆ.

ಬೆಳಗಾವಿ ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದ್ದು, ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ದೇಶಗಳಲ್ಲಿ ಅತಿ ವೇಗವಾಗಿ ಹಬ್ಬುತ್ತಿರುವ ಕರೊನಾ ವೈರಸ್ ಪ್ರಕರಣಗಳು 120ರ ಅಂಕಿ ಗಡಿ ದಾಟಿದೆ. ಆದರೆ, ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದರೂ ಭಾರತದಲ್ಲಿ ಇಲ್ಲಿಯವರೆಗೆ ಕರೊನಾ ವೈರಸ್ ಪ್ರಕರಣಗಳು 70 ಅಂಕಿ ದಾಟಿಲ್ಲ. ಇದಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದೆ. ಅಧ್ಯಯನ ಮತ್ತು ಸಂಶೋಧನೆಗಾಗಿ ವೈದ್ಯಾಧಿಕಾರಿಗಳ ತಂಡ ಭಾರತಕ್ಕೆ ಆಗಮಿಸುತ್ತಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net