Areca nut ಕ್ಯಾನ್ಸರ್‌ ಕಾರಕ ಎಂಬ ಡಬ್ಲುಎಚ್‌ಒ ವರದಿಯ ಬಗ್ಗೆ ಸಂಸದ ಕಾಗೇರಿ ಆಕ್ಷೇಪ

areca nut
Published on

ಕಾರವಾರ: Areca nut ಅಡಕೆ ಕ್ಯಾನ್ಸರ್‌ ಕಾರಕ  ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆ ನೀಡಿರುವ ವರದಿಯು ಆಧಾರ ರಹಿತವಾಗಿದೆ. ವರದಿಯನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರ ಸರ್ಕಾರದ ಮೂಲಕ ವಿಶ್ವ ಆರೋಗ್ಯ ಸಂಸ್ಥೆಗೆ ಮನವರಿಕೆ ಮಾಡಲು ಕ್ರಮ ವಹಿಸಲಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. `ತಂಬಾಕು, ಅಡಕೆ ಬಳಕೆಯಿಂದ ಬಾಯಿ ಕ್ಯಾನ್ಸರ್, ವಿಶ್ವ ಆರೋಗ್ಯ ಸಂಸ್ಥೆಯ ವರದಿಯಲ್ಲಿ ಉಲ್ಲೇಖ ಜಿಲ್ಲೆಯ ಬೆಳೆಗಾರರಲ್ಲಿ ಆತಂಕ ಹೆಚ್ಚಳ' ಎಂಬ ಶೀರ್ಷಿಕೆಯಡಿ `ವಿಜಯವಾಣಿ' ನ.19 ರಂದು ಪ್ರಕಟಿಸಿ ವಿಶೇಷ ವರದಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. `ಇಂಟರ್ ನ್ಯಾಶನಲ್ ಏಜನ್ಸಿ ಫಾರ್ ರಿಸರ್ಚ್ ಆ್ಯಂಡ್ ಕ್ಯಾನ್ಸರ್' ಎಂಬ ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆಯು ಅಡಕೆ ಕ್ಯಾನ್ಸರ್ ಕಾರಕ ಎಂದು ಯಾವುದೇ ಆಧಾರವಿಲ್ಲದೆ ಅವೈಜ್ಞಾನಿಕ ವರದಿ ನೀಡಿದೆ. ಸಾವಿರಾರು ವರ್ಷಗಳಿಂದ ಅಡಕೆ ಭಾರತ ಹಾಗೂ ಸುತ್ತಲಿನ ರಾಷ್ಟçಗಳಲ್ಲಿ ಬಳಕೆಯಲ್ಲಿದ್ದು, ಪೂಜನೀಯ ಸ್ಥಾನದಲ್ಲಿದೆ. ತಂಬಾಕು ಬೇರ್ಪಟ್ಟ ಅಡಿಕೆ ಯಾವುದೇ ಕಾರಣಕ್ಕೂ ಆರೋಗ್ಯಕ್ಕೆ ಹಾನಿಕರವಲ್ಲ ಎನ್ನುವುದು ಅನೇಕ ಸಂಶೋಧನೆಗಳಿಂದ ಹಾಗೂ ವೈಜ್ಞಾನಿಕವಾಗಿಯೂ ದೃಡಪಟ್ಟಿದೆ.

Areca nut ಬಗ್ಗೆ ಸಾಕಷ್ಟು ಅಧ್ಯಯನ

ಈಗಾಗಲೇ ಕ್ಯಾಂಪ್ಕೋ ಹಾಗೂ ಅನೇಕ ವಿಶ್ವ ವಿದ್ಯಾನಿಲಯಗಳು ಅಡಕೆ ಮೇಲೆ ಸಂಶೋಧನೆಗಳನ್ನು ಕೈಗೊಂಡು, ಅದು ಕ್ಯಾನ್ಸರ್ ಕಾರಕವಲ್ಲ ಎಂಬ ವರದಿಯನ್ನು ನೀಡಿವೆ. ಔಷದೀಯ ಗುಣಗಳು ಸಹ ಅಡಕೆಯಲ್ಲಿರುವ ಬಗ್ಗೆ ಉಲ್ಲೇಖಿಸಿವೆ. ಇಂತಹ ಯಾವುದೇ ವೈಜ್ಞಾನಿಕ ಸಂಶೋಧನೆಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ವಿಶ್ವ ಆರೋಗ್ಯ ಸಂಸ್ಥೆಯ ಅಂಗ ಸಂಸ್ಥೆಯು ವರದಿ ನೀಡಿರುವುದು ಸಮಂಜಸವೆನಿಸುವುದಿಲ್ಲ.

ಈ ಅಂಶಗಳನ್ನು ಮತ್ತು ವೈಜ್ಞಾನಿಕ ಸಂಶೋದನೆಯ ಅಂಶಗಳನ್ನು ಮುಂದಿಟ್ಟು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಗಮನಕ್ಕೆ ತರಲಾಗಿದೆ. ಸರ್ಕಾರದ ಮಟ್ಟದಲ್ಲೂ ಸಹ ಗಂಭೀರವಾಗಿ ಪ್ರಯತ್ನಿಸುವಂತೆ ಸಂಬAಧಪಟ್ಟ ಸಚಿವರಿಗೆ ಹಾಗೂ ಇಲಾಖೆಯ ಮುಖ್ಯಸ್ಥರಿಗೆ ಮನವರಿಕೆ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗಿದೆ.

Areca nut ಅಡಕೆ ಮಾರುಕಟ್ಟೆಯನ್ನು ಅಸ್ಥಿರಗೊಳಿಸುವ ಇಂತಹ ಷಡ್ಯಂತ್ರಗಳನ್ನು ತಡೆಯಲು ಕೇಂದ್ರ ಹಣಕಾಸು, ವಾಣಿಜ್ಯ ಹಾಗೂ ಆರೋಗ್ಯ ಇಲಾಖೆಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಕಾಲಕಾಲಕ್ಕೆ ಅಡಕೆ ಬೆಳೆಗಾರರ ಹಿತರಕ್ಷಣೆಗಾಗಿ ಅಗತ್ಯವಾದ ಎಲ್ಲ ಕ್ರಮಗಳ ಬಗ್ಗೆ ಪ್ರಯತ್ನಿಸಲಾಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ರೈತರು ಭಯಭೀತರಾಗುವ ಅಗತ್ಯವಿಲ್ಲ. ದೇಶದಲ್ಲಿಯೇ ಕರ್ನಾಟಕವು ಅತಿಹೆಚ್ಚು ಅಡಿಕೆ ಬೆಳೆಯುವ ರಾಜ್ಯವಾಗಿದೆ. ಆದ ಕಾರಣ ರಾಜ್ಯ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸುತ್ತೇನೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net