ಲೋಕಾಯುಕ್ತದಲ್ಲಿನ ಕೇಸ್‌ಗಳನ್ನು ಎಸಿಬಿಗೆ ವರ್ಗಾಯಿಸಿದ್ದು ಯಾರು?

CM basavaraj bommai
Published on

ಮೈಸೂರು: ಸಿದ್ದರಾಮಯ್ಯ ಅವರು ಲೋಕಾಯುಕ್ತವನ್ನು ಬಂದ್ ಮಾಡಲಿಲ್ಲ. ಬದಲಿಗೆ, ಅದರ ಹಲ್ಲುಗಳನ್ನೆಲ್ಲಾ ಕಿತ್ತು ಹಾಕಿದರು. ಹಲ್ಲು ಕಿತ್ತ ಮೇಲೆ ಇದ್ದರೆಷ್ಟು, ಇಲ್ಲದಿದ್ದರೆಷ್ಟು? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಲು ಮಂಗಳವಾರ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

‘ನಾನು ಲೋಕಾಯುಕ್ತವನ್ನು ಬಂದ್ ಮಾಡಿದ್ದೆ ಎಂಬುದನ್ನು ಬಿಜೆಪಿಯವರು ಸಾಬೀತುಪಡಿಸಿದರೆ ತಕ್ಷಣ ರಾಜೀನಾಮೆ ಕೊಡುತ್ತೇನೆ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ತಮ್ಮ ಕಾಲದಲ್ಲೇಕೆ ಲೋಕಾಯುಕ್ತದಲ್ಲಿನ ಕೇಸ್‌ಗಳನ್ನು ಎಸಿಬಿಗೆ ವರ್ಗಾಯಿಸುತ್ತಿದ್ದರು? ಎಂದು ಕೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net