

ಗ್ಯಾರಂಟಿ ಯೋಜನೆಗಳಿಗಾಗಿ 86 ಸಾವಿರ ಕೋಟಿ ರೂ. ಸಾಲ ಮಾಡಲಾಗಿದೆ. ಈಗ ಮಾಡಿದ ಸಾಲ ತೀರಿಸುವವರು ಯಾರು? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ನಗರದ ಸುತ್ತೂರು ಶಾಖಾ ಮಠಕ್ಕೆ ಭಾನುವಾರ ಭೇಟಿ ನೀಡಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಲಾಗುತ್ತಿದೆ. 200 ಯೂನಿಟ್ ವಿದ್ಯುತ್ ಉಚಿತವೆಂದು ಘೋಷಣೆ ಮಾಡಿದ್ದರು.
ಇದೀಗ ಕಂಡೀಷನ್ ಮೇಲೆ ಕಂಡೀಷನ್ ಹಾಕುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಕಾರಣಕ್ಕಾಗಿ ಅಭಿವೃದ್ಧಿ ನಿಂತೇಹೋಗಿದೆ. ಶಾಸಕರಿಗೆ ಅನುದಾನ ಸಿಗುತ್ತಿಲ್ಲ. ಮುಂದೆ ಇದೆಲ್ಲ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುದನ್ನು ಕಾದುನೋಡಿ ಎಂದರು.
ಶಾಸಕ ಜಿ.ಟಿ.ದೇವೇಗೌಡ, ಎಂಎಲ್‌ಸಿ ಸಿ.ಎನ್.ಮಂಜೇಗೌಡ, ಮಾಜಿ ಸಚಿವ ಸಾ.ರಾ.ಮಹೇಶ್ ಇತರರಿದ್ದರು.