

ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷದಿಂದ ಯಾರೇ ಸ್ಪರ‌್ಸಿದರೂ ಅವರನ್ನು ಗೆಲ್ಲಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಬಿಜೆಪಿ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಹೇಳಿದ್ದಾರೆ.
ನಗರದಲ್ಲಿರುವ ಬಿಜೆಪಿ ಗ್ರಾಮೀಣ ಮಂಡಲ ಕಾರ್ಯಾಲಯದಲ್ಲಿ ಬುಧವಾರ ಜರುಗಿದ ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲ ಪದಾಕಾರಿಗಳ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ ಎಂದು ಹೇಳಿದರು.
ಕಾರ್ಯಕರ್ತರ ಪಕ್ಷ ನಿಷ್ಠೆ ಹಾಗೂ ಪ್ರಾಮಾಣಿಕತೆ ಗುರುತಿಸಿ ಉನ್ನತ ಸ್ಥಾನಮಾನ ನೀಡುವ ಏಕೈಕ ಪಕ್ಷವೆಂದರೆ ಅದು ಬಿಜೆಪಿ. ಹಾಗಾಗಿ, ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು.
ಬೆಳಗಾವಿ ಗ್ರಾಮೀಣ ಮಂಡಲ ಅಧ್ಯಕ್ಷ ಧನಂಜಯ ಜಾಧವ, ಮಹೇಶ ಮೋಹಿತೆ, ಸುಭಾಷ ಪಾಟೀಲ, ಸಂದೀಪ ದೇಶಪಾಂಡೆ, ಜಿಲ್ಲಾ ಉಪಾಧ್ಯಕ್ಷ ಯುವರಾಜ ಜಾಧವ, ರಂಜನಾ ಕೋಲಕಾರ, ವೀರಭದ್ರಯ್ಯ ಪೂಜಾರ, ನಿಕಟಪೂರ್ವ ಮಂಡಲ ಅಧ್ಯಕ್ಷ ಮೋಹನ ಅಂಗಡಿ, ಪಂಕಜ್ ಘಾಡಿ, ಉಮೇಶ ಪುರಿ, ಭಾಗ್ಯಶ್ರೀ ಕೋಕಿತಕರ, ಕಲ್ಲಪ್ಪ ಸಂಪಗಾವಿ, ಯಲ್ಲೇಶ ಕೋಲಕಾರ, ಸಿದ್ದಪ್ಪ ಹುಕ್ಕೇರಿ, ಶಾಲು ರ್ನಾಂಡೀಸ್, ನಿತಿನ ಚೌಗಲೆ, ಉಮೇಶ ಶಿಂಧೋಳಕರ ಇತರರು ಇದ್ದರು.