ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಗೆ ವಿರೋಧ: ಸಚಿವ ಆನಂದ ಸಿಂಗ್ ಘೇರಾವ್ ಗೆ ಮುಂದಾದ ಹೋರಾಟಗಾರರ ಬಂಧನ, ಬಿಡುಗಡೆ

291120 Ballari Whole District Fight
ಬಳ್ಳಾರಿಯ ಕನಕ ದುರ್ಗಮ್ಮ ದೇವಸ್ಥಾನದ ಬಳಿ ಭಾನುವಾರ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಅಖಂಡ ಜಿಲ್ಲಾ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು.
Published on

ಬಳ್ಳಾರಿ: ನಗರದಲ್ಲಿ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್‌ಗೆ ಘೇರಾವ್ ಹಾಕಲು ಮುಂದಾಗಿದ್ದ ಅಖಂಡ ಜಿಲ್ಲೆ ಹೋರಾಟ ಸಮಿತಿ ಮುಖಂಡರನ್ನು ಪೊಲೀಸರು ಭಾನುವಾರ ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.

ಬಿಜೆಪಿಯಿಂದ ಆಯೋಜಿಸಿದ್ದ ಗ್ರಾಮ ಸ್ವರಾಜ್ ಸಮಾವೇಶದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆನಂದ ಸಿಂಗ್ ಆಗಮಿಸಿದ್ದರು. ಅಲ್ಲಿಗೆ ತೆರಳುವ ಮುನ್ನ ಕನಕ ದುರ್ಗಮ್ಮ ದರ್ಶನ ಮಾಡಲಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಹೋರಾಟಗಾರರು ದೇವಸ್ಥಾನದ ಬಳಿ ಜಮಾಯಿಸಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಹೋರಾಟಗಾರರನ್ನು ಪೊಲೀಸರು ಬಂಧಿಸಿ, ಎಪಿಎಂಸಿ ಪೊಲೀಸ್ ಠಾಣೆಗೆ ಕರೆದೊಯ್ದರು. ಮಧ್ಯಾಹ್ನ ನಗರದಿಂದ ಆನಂದ ಸಿಂಗ್ ನಿರ್ಗಮಿಸಿದ ಬಳಿಕ ಹೋರಾಟಗಾರರನ್ನು ಪೊಲೀಸರು ಬಿಡುಗಡೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net