ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ

mysore
Published on

ಮೈಸೂರು: ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂದು ಮೋದಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಹಾಗಾದರೆ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ ಎಂದು ಪ್ರಶ್ನಿಸಿದರು. ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೇ 3-4 ತಿಂಗಳು ಬಂದು ಸೋಲುವ ವರದಿಯಾಧಾರದ ಮೇಲೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದರು.

ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿ ಯಾದಾಗ ಸಾವರ್ಕರ್ ಹಾಗು ಗೋಲ್ವಾಲ್ಕರ್ ಅವರು ಭಾರತದ ಸಂವಿಧಾನವನ್ನು ವಿರೋಧಿಸಿದ್ದರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net