ತಿಂಗಳಾಂತ್ಯದವರೆಗೂ ಕರಾವಳಿಯಲ್ಲಿ ವ್ಯಾಪಕ ಮಳೆ: ಐಎಂಡಿಯಿಂದ ಯೆಲ್ಲೋ ಅಲರ್ಟ್ ಘೋಷಣೆ

rains
Published on

ಬೆಂಗಳೂರು: ಬಂಗಾಳ ಉಪಸಾಗರದ ಉತ್ತರ ಭಾಗದಲ್ಲಿ ಒಡಿಶಾದ ಕರಾವಳಿಯ ಹತ್ತಿರ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಈ ತಿಂಗಳಾಂತ್ಯದವರೆಗೂ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರದಿಂದಲೇ ಭಾರಿ ಮಳೆ ಆಗಲಿದ್ದು, ಐದು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜತೆಗೆ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳೂ ಸೇರಿ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚಿನ ವರ್ಷಧಾರೆ ಆಗಲಿದೆ. ಈ ಎಲ್ಲ ಜಿಲ್ಲೆಗಳಲ್ಲೂ ಗುರುವಾರದವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಳೆಯ ಜತೆಗೆ ಗಾಳಿಯು 40 ಕಿ.ಮೀ. ವೇಗದಲ್ಲಿ ಬೀಸಲಿದೆ. ಉಳಿದಂತೆ ಒಳನಾಡು ಪ್ರದೇಶಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಲಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಶನಿವಾರದ ವರೆಗೆ ಹಗುರ ಅಥವಾ ಸಾಧಾರಣ ಪ್ರಮಾಣದ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net