ಜೀವನಾಂಶ ಕೋರಿ ಪತ್ನಿ ದಾವೆ ಹೂಡಿದ್ದರಿಂದ ಪತಿ ಆತ್ಮಹತ್ಯೆ

Boy Suside+1
Published on

ಹಾವೇರಿ: ಜೀವನ ನಿರ್ವಹಣೆಗಾಗಿ ಜೀವನಾಂಶ ಕೋರಿ ಪತ್ನಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರಿಂದ ಮನನೊಂದು ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಸವರಾಜ ಶ್ರೀಶೈಲಪ್ಪ ದುರ್ಗದ (38) ಮೃತ ವ್ಯಕ್ತಿ.

ಈತನ ಪತ್ನಿ ಕಳೆದ ಎರಡ್ಮೂರು ವರ್ಷಗಳಿಂದ ತವರು ಮನೆಗೆ ಹೋಗಿದ್ದು ಜೀವನಾಂಶಕ್ಕಾಗಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಳು. ಇದರಿಂದ ಮನನೊಂದ ಬಸವರಾಜ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net