ಪತ್ನಿ ಸಾವಿನ ಸುದ್ದಿ ಕೇಳಿ ಪತಿಯೂ ಮೃತ

Published on

ಹನೂರು: ತಾಲೂಕಿನ ಮಂಗಲ ಗ್ರಾಮದಲ್ಲಿ ಪತ್ನಿ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಪತಿಯೂ ಹೃದಯಾಘಾತದಿಂದ ನಿಧನರಾಗಿದ್ದಾರೆ.


ಗ್ರಾಮದ ರಾಜಶೇಖರ ಆರಾಧ್ಯ (70) ಹಾಗೂ ಸುಮಿತ್ರಮ್ಮ (65) ಮೃತ ದಂಪತಿ. ಕೃಷಿಕರಾಗಿದ್ದ ಇಬ್ಬರು ಗ್ರಾಮ ಸಮೀಪದ ರಾಮನಗುಡ್ಡ ಡ್ಯಾಂ ಬಳಿಯ ಜಮೀನಿನಲ್ಲಿ ವಾಸವಿದ್ದರು. ಶುಕ್ರವಾರ ಬೆಳಗ್ಗೆ ಪತ್ನಿ ಸುಮಿತ್ರಮ್ಮಗೆ ಎದೆನೋವು ಕಾಣಿಸಿಕೊಂಡಿದೆ. ಹಾಗಾಗಿ ಪತಿ ರಾಜಶೇಖರ ಆರಾಧ್ಯ ಪತ್ನಿಯನ್ನು ಸಮೀಪದ ಕಾಮಗೆರೆಯ ಖಾಸಗಿ ಆಸ್ಪತ್ರೆ ಚಿಕಿತ್ಸೆಗೆ ದಾಖಲಿಸಿದ್ದರು. ರಾತ್ರಿ ಪತ್ನಿ ಮೃತಪಟ್ಟಿದ್ದಾರೆ. ಈ ಸುದ್ದಿ ತಿಳಿದ ಕೂಡಲೇ ಆಸ್ಪತ್ರೆಯಲ್ಲಿದ್ದ ಪತಿಯೂ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮೃತರಿಗೆ ಒಬ್ಬ ಪುತ್ರ, ಓರ್ವ ಪುತ್ರಿ ಇದ್ದಾರೆ. ಶನಿವಾರ ಅಂತ್ಯಕ್ರಿಯೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net