ಮಳವಳ್ಳಿಯಲ್ಲಿ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ

11 mlv 3
ಮಳವಳ್ಳಿ ಪಟ್ಟಣದ ಎನ್‌ಇಎಸ್ ಬಡಾವಣೆಯಲ್ಲಿ ಬುಧವಾರ ಪತ್ನಿಗೆ ಮಚ್ಚಿನಿಂದ ಹಲ್ಲೆ ನಡೆಸಿ ತಾನೂ ಚಾಕು ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ನಟೇಶ್‌ನನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದರು.
Published on

ಮಳವಳ್ಳಿ: ಪಟ್ಟಣದ ಎನ್‌ಇಎಸ್ ಬಡಾವಣೆಯಲ್ಲಿ ಬುಧವಾರ ವ್ಯಕ್ತಿಯೊಬ್ಬ ಪತ್ನಿಗೆ ಮಚ್ಚಿನಿಂದ ಹಲ್ಲೆ ನಡೆಸಿ ತಾನೂ ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.


ಬಡಾವಣೆಯ ನಟೇಶ್ ಚಾಕುವಿನಿಂದ ಚುಚ್ಚಿಕೊಂಡವ. ಪತ್ನಿ ಸುಜಾತಾ ಹಲ್ಲೆಗೊಳಗಾದವರು. ಪತಿ, ಪತ್ನಿ ಇಬ್ಬರೂ ಸಣ್ಣಪುಟ್ಟ ವಿಚಾರಕ್ಕೆ ಜಗಳವಾಡುತ್ತಿದ್ದು, ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಅತಿರೇಕಕ್ಕೆ ಹೋಗಿದೆ. ಇದರಿಂದ ಕೋಪಗೊಂಡು ಪತ್ನಿ ತಲೆಗೆ ಮಚ್ಚಿನಿಂದ ಹೊಡೆದಿದ್ದಾನೆ.

ಕೂಡಲೇ ಸುಜಾತಾ ಮನೆಯಿಂದ ಹೊರಗಡೆ ಓಡಿಬಂದಿದ್ದಾರೆ. ಗಾಬರಿಗೊಂಡ ಪತಿ ನಟೇಶ್ ಚಾಕು ತೆಗೆದುಕೊಂಡು ಹೊಟ್ಟೆಗೆ ಚುಚ್ಚಿಕೊಂಡಿದ್ದು, ತೀವ್ರ ರಕ್ತಸ್ರಾವಗೊಂಡು ಮನೆಯಲ್ಲೆ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಇನ್ಸ್‌ಪೆಕ್ಟರ್ ರವಿಕುಮಾರ್ ಮತ್ತು ಸಿಬ್ಬಂದಿ ಗಾಯಾಳುಗಳಿಬ್ಬರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net